ಬೆಳಗಾವಿ : ಜಿಲ್ಲೆಯಾದ್ಯಂತ ಸತತವಾಗಿ ಮಳೆಯಾಗುತ್ತಿರುವುದರಿಂದ ಜುಲೈ 27ರಂದು ಜಿಲ್ಲೆಯ ರಾಮದುರ್ಗ ತಾಲೂಕು ಹೊರತುಪಡಿಸಿ ಉಳಿದ ಎಲ್ಲ ತಾಲ್ಲೂಕುಗಳ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪದವಿಪೂರ್ವ ಕಾಲೇಜು, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಅಂಗನವಾಡಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ. ಮುಂಬರುವ ದಿನಗಳಲ್ಲಿ ಸದರಿ ರಜೆಯನ್ನು ಸರಿದೂಗಿಸಿಕೊಳ್ಳಬೇಕು ಎಂದು
ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.