ಬೆಳ್ತಂಗಡಿಯ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ

0
7

ಬೆಳ್ತಂಗಡಿ: ಕಾಂಗ್ರೆಸ್ ಮುಖಂಡ ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ಅನಾರೋಗ್ಯದಿಂದ ಇತ್ತೀಚೆಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಇಂದು ಕೊನೆಯುಸಿರೆಳೆದಿದ್ದಾರೆ,
ಮೇ 9ರಂದು ಮುಂಜಾನೆ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸುವ ನಿರೀಕ್ಷೆ ಇದೆ. ನಂತರ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

Previous articleನಾಳೆ SSLC ಪರೀಕ್ಷೆ ಫಲಿತಾಂಶ ಪ್ರಕಟ
Next articleಐಐಟಿಯ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ  ನೇಮಕ