ಬೆಳ್ಳಂಬೆಳಗ್ಗೆ ಉಪ ಲೋಕಾಯುಕ್ತರ ದಾಳಿ

0
32

ಕೋಲಾರ: ನಗರದ ಎಪಿಎಂಸಿ ಮಾರುಕಟ್ಟೆಗೆ ಉಪಲೋಕಾಯುಕ್ತ ನ್ಯಾ. ಬಿ ವೀರಪ್ಪ ಸೋಮವಾರ ಬೆಳಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ದಲ್ಲಾಳಿಗಳ ಹಾವಳಿಯಿಂದ ರೈತರಿಗೆ ಯೋಗ್ಯ ಬೆಲೆ ಸಿಗುತ್ತಿಲ್ಲ ಹಾಗೂ ತೂಕದಲ್ಲಿ ಮೋಸ ಮಾಡಲಾಗುತ್ತಿದೆ ಎಂಬ ಆರೋಪಗಳ ಕಾರಣ ಉಪಲೋಕಾಯುಕ್ತರು ಈ ಕ್ರಮ ಕೈಗೊಂಡಿದ್ದಾರೆ. ಇದೇ ವೇಳೆ, ಹಳೆಯ ತೂಕ ಮಾಡುವ ಮಾಪನ ಕಂಡು ಉಪಲೋಕಾಯುಕ್ತರು ಗರಂ ಆಗಿದ್ದು, ಕಮಿಷನ್ ಹೆಚ್ಚಿಗೆ ವಸೂಲಿ ಮಾಡುತ್ತಿದ್ದಾರೆ, ಒಳಗೆ ಏನು ನಡೆಯುತ್ತಿದೆ ಎಂಬುದು ಅಲ್ಲಿನ ಅಧಿಕಾರಿಗಳಿಗೇ ಗೊತ್ತಿಲ್ಲ. ಅವರು ಏನು ಕೆಲಸ ಮಾಡುತ್ತಿದ್ದರೋ ಏನೋ? ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳುತ್ತೇನೆ ಎಂದಿದ್ದಾರೆ.

Previous articleಪ್ರಾಣಿಗಳಿಗೆ ಮನುಷ್ಯ ಜ್ವರ
Next articleಪ್ರಭಾವಿಗಳ ಸುತ್ತ ಅನುಮಾನದ ಹುತ್ತ