ಬೆಳ್ಳಂಬೆಳಗ್ಗೆ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ

0
26
ಕೊಲೆ

ಚಾಕುವಿನಿಂದ ಎದೆ, ಕುತ್ತಿಗೆ ಹಾಗೂ ಹೊಟ್ಟೆ ಭಾಗಕ್ಕೆ ಇರಿದು ಕೊಲೆ

ಹೊಸಪೇಟೆ: ಬೆಳ್ಳಂಬೆಳಗ್ಗೆ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಹಲವು ಬಾರಿ ಚುಚ್ಚಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ.
ನಗರದ ಭಟ್ರಹಳ್ಳಿ ಆಂಜನೇಯ ದೇವಸ್ಥಾನ ಬಳಿ ಈ ಘಟನೆ ನಡೆದಿದೆ. ವ್ಯಕ್ತಿಯನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಚಾಕುವಿನಿಂದ ಎದೆ, ಕುತ್ತಿಗೆ ಹಾಗೂ ಹೊಟ್ಟೆ ಭಾಗಕ್ಕೆ ಇರಿಯಲಾಗಿದೆ. ರಕ್ತದ ಮಾಡುವಲ್ಲಿ ಬಿದ್ದು ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹೊಸಪೇಟೆ ನಿವಾಸಿ ರಾಮಲಿ (40) ಕೋಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಈ ಸಂಬಂಧ ಸ್ಥಳಕ್ಕೆ ಹೊಸಪೇಟೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಯಿತು. ಸ್ಥಳಕ್ಕೆ ಬೆರಳಚ್ಚು ತಜ್ಞರು ಬಂದು ಪರಿಶೀಲನೆ ನಡೆಸಿದ್ದಾರೆ..

Previous articleಕುಂಭಮೇಳವು ಭಾರತದ ಆಧ್ಯಾತ್ಮಿಕ ಅಸ್ಮಿತೆ
Next articleಕನ್ನಡ ಸಿಬ್ಬಂದಿ ಕಡಿತಕ್ಕೆ ಮುಂದಾದ ಸರ್ಕಾರ