ದಾವಣಗೆರೆ: ಅಕ್ರಮ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾವಣಗೆರೆ ನಗರ ನೀರು ಸರಬರಾಜು ಇಲಾಖೆಯ ಸಹಾಯಕ ಇಂಜಿನಿಯರ್ ಬಿ.ರವಿ ಅವರ ಕಚೇರಿ ಮತ್ತು ಮನೆ ಮೇಲೆ ದಾಳಿ ನಡೆಸಿದ್ದಾರೆ.
ನಗರದ ನಿಜಲಿಂಗಪ್ಪ ಬಡಾವಣೆಯ ಬಕ್ಕೇಶ್ವರ ಶಾಲೆ ಸಮೀಪವಿರುವ ಕಚೇರಿ ಹಾಗೂ ಶಿವಕುಮಾರಸ್ವಾಮಿ ಬಡಾವಣೆಯಲ್ಲಿ ಇರುವ ಬಿ.ರವಿ ಅವರ ತಾಯಿ ಮನೆಯ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಶಾಕ್ ಮೂಡಿಸಿದ್ದಾರೆ.
ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂ.ಎಸ್ .ಕೌಲಾಪುರೆ ನೇತೃತ್ವದಲ್ಲಿ ಡಿವೈಎಸ್ಪಿ ಕಲಾವತಿ ಸೇರಿದಂತೆ ನಾಲ್ಕು ತಂಡಗಳು ಬಿ.ರವಿ ಅವರ ಪತ್ನಿ ತವರು, ಅತ್ತೆಯ ಮನೆ, ಚಿತ್ರದುರ್ಗ, ಚಳ್ಳಕೆರೆ ಮತ್ತು ಅವರ ಸಂಬಂಧಿಕರ ಮನೆಗಳ ಮೇಲೆ ದಾಳಿ ನಡೆಸಿ ಅಕ್ರಮವಾಗಿ ಸಂಪಾದಿಸಿರುವ ಆಸ್ತಿ ಪತ್ರಗಳ ಶೋಧನೆಯಲ್ಲಿ ತೊಡಗಿದ್ದು, ಈ ಸಂಬಂಧ ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.