ಬೆಳ್ಳಂ ಬೆಳಗ್ಗೆ ಕಲಬುರಗಿ ಮಹಾನಗರ ಪಾಲಿಕೆಯ ಉಪಯುಕ್ತ ಜಾಧವ್ ಮನೆ ಮೇಲೆ ಲೋಕಾಯುಕ್ತ ದಾಳಿ

0
24

ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಯ ಉಪ ಆಯುಕ್ತ ಆರ್.ಪಿ. ಜಾಧವ ಅವರ ಮನೆ ಮತ್ತು ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತ ಪೊಲೀಸರು ಇಂದು(ಮಂಗಳವಾರ) ಬೆಳಂ ಬೆಳಗ್ಗೆ ದಾಳಿ ನಡೆಸಿದ್ದಾರೆ.

ಇಲ್ಲಿನ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಬಿ.ಕೆ. ಉಮೇಶ ಅವರ ನೇತೃತ್ವದಲ್ಲಿ ಮೂರು ತಂಡಗಳಲ್ಲಿ ಮೂವತ್ತಕ್ಕೂ ಹೆಚ್ಚು ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ನಗರದ ಎನ್‌ಜಿಒ ಕಾಲೊನಿಯ ಮನೆ, ಫರಹತಾಬಾದ್ ಸಮೀಪದ ಅವರ ಫಾರ್ಮ್ ಹೌಸ್ ಮೇಲೆ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆಂದು ತಿಳಿದು ಬಂದಿದೆ.
ಮನೆಯಲ್ಲಿ ದಾಳಿ ಮಾಡಿದ ಬಳಿಕ ಪ್ರಾರಂಭದಲ್ಲಿ 30 ತೊಲೆ ಬಂಗಾರ, ಬೆಳ್ಳಿ, ಕಾರು, ಬೈಕ್‌ಗಳು ಸಿಕ್ಕಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇವರಿಗೆ ಸಂಬಂಧಪಟ್ಟಂತ ಮನೆ ಕಟ್ಟಡ ಕಚೇರಿಗಳಲ್ಲಿ ಶೋಧ ಕಾರ್ಯ ಮುಂದುವರೆದಿದೆ.
ಆರ್.ಪಿ. ಜಾಧವ ಅವರು ಕಳೆದ ಕೆಲವು ವರ್ಷಗಳಿಂದ ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಉಪ ಆಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Previous articleನಾಳೆ ರಾಜ್ಯಾದ್ಯಂತ ‘ಸರ್ಕಾರಿ ರಜೆ’ ಘೋಷಣೆ
Next articleಎಸ್.ಎಂ. ಕೃಷ್ಣ ನಿಧನಕ್ಕೆ ಬಾಳೆಹೊನ್ನೂರು ರಂಭಾಪುರಿ ಶ್ರೀ  ಸಂತಾಪ