ಬೆಳ್ಳಂ ಬೆಳಿಗ್ಗೆ ರಾಜ್ಯದಲ್ಲಿ ವಿವಿಧೆಡೆ ಏಕಕಾಲಕ್ಕೆ 40 ಕಡೆ ಲೋಕಾಯುಕ್ತ ದಾಳಿ

0
47

ಬೆಂಗಳೂರು: ಬೆಳ್ಳಂ ಬೆಳಿಗ್ಗೆ ರಾಜ್ಯಾದ್ಯಂತ ಏಳು ಅಧಿಕಾರಿಗಳ ಮನೆಗಳು ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ.
ಬೆಂಗಳೂರಿನ 12 ಕಡೆ ಸೇರಿ ರಾಜ್ಯದ ಹಲವೆಡೆ ಏಕಕಾಲಕ್ಕೆ ದಾಳಿ ಮಾಡುವ ಮೂಲಕ ಶಾಕ್ ನೀಡಲಾಗಿದೆ. ಬೆಂಗಳೂರಿನ 12, ತುಕೂರಿನ 7, ಬೆಂಗಳೂರು ಗ್ರಾಮಾಂತರದ 8, ಯಾದಗಿರಿ 5, ಮಂಗಳೂರಿನ 4, ಮತ್ತು ವಿಜಯಪುರದ 4 ಕಡೆ ಲೋಕಾಯುಕ್ತ ದಾಳಿ ಮಾಡಿದೆ.
ಅಕ್ರಮ ಆಸ್ತಿ ಗಳಿಕೆ ದೂರುಗಳು ಬಂದ ಹಿನ್ನೆಲೆ ದಾಳಿ ಮಾಡಿರುವ ಲೋಕಾ, ಅಧಿಕಾರಿಗಳ ಮನೆ ಮತ್ತು ಕಚೇರಿಗಳಲ್ಲಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ರಾಜಶೇಖರ್: ಯೋಜನಾ ನಿರ್ದೇಶಕರು ನಿರ್ಮಿತಿ ಕೇಂದ್ರ ತುಮಕೂರು, ಮಂಜುನಾಥ್: ಸರ್ವೆ ಸೂಪರ್ವೈಸರ್, ಮಂಗಳೂರು, ರೇಣುಕಾ: ಡಾ.ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ಅಧಿಕಾರಿ ವಿಜಯಪುರ, ಮುರಳಿ ಟಿವಿ: ಹೆಚ್ಚುವರಿ ನಿರ್ದೇಶಕರು, ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶನಾಲಯ, ಬೆಂಗಳೂರು, ಹೆಚ್ಆರ್ ನಟರಾಜ್: ಇನ್ಸ್‌ಪೆಕ್ಟರ್, ಕಾನೂನು ಮಾಪನಶಾಸ್ತ್ರ ಬೆಂಗಳೂರು, ಅನಂತ್ ಕುಮಾರ್: SDA, ಹೊಸಕೋಟೆ ತಾಲೂಕು ಕಛೇರಿ ಬೆಂಗಳೂರು ಗ್ರಾಮಾಂತರ, ಉಮಾಕಾಂತ್‌: ಶಹಾಪುರ ತಾಲೂಕು ಕಚೇರಿ ಯಾದಗಿರಿ ಇವರ ಮನೆ ಮೇಲೆ ಐಟಿ ದಾಳಿ ಮಾಡಲಾಗಿದ್ದು, ರಾಜ್ಯದಲ್ಲಿ ಏಕಕಾಲಕ್ಕೆ 40 ಕಡೆಗಳಲ್ಲಿ ಲೋಕಾಯುಕ್ತ ದಾಳಿ ನಡೆದಿದೆ ಎನ್ನಲಾಗಿದೆ.

Previous articleಆಪತ್ತಿನ ಕಾಲದ ಧರ್ಮಾಚರಣೆ
Next articleಸಾಲಬಾಧೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು