ಬೈಕಿಗೆ ಕಾರು ಡಿಕ್ಕಿ: ಯುವಕ ಸಾವು

0
45

ಬೆಳ್ತಂಗಡಿ: ಬೈಕಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಓಡಿಲ್ನಾಳ ನಿವಾಸಿ ಯುವಕ ಸಾವನ್ನಪ್ಪಿದ ಘಟನೆ ಗುರುವಾರ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಓಡಿಲ್ನಾಳದ ಕುಂದಲಿಕೆ ನಿವಾಸಿ ಶಜಿ ಎಂಬವರ ಪುತ್ರ ಸಜೇಶ್ (26) ಎನ್. ಆರ್. ಪುರ ಬಳಿ ಅಲ್ಯೂಮಿನಿಯಂ ಪ್ಯಾಬ್ರಿಕೇಶನ್ ಕೆಲಸಕ್ಕೆ ತೆರಳಿದ್ದು ಗುರುವಾರ ಮಧ್ಯಾಹ್ಮ ಕೆಲಸದಿಂದ ಊಟಕ್ಕೆಂದು ತೆರಳುತಿದ್ದ ವೇಳೆ ಎದುರಿನಿಂದ ಬಂದ ಕಾರು ಬೈಕಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

Previous articleವಿಶೇಷ ರಥದಲ್ಲಿ ಸಮ್ಮೇಳನಾಧ್ಯಕ್ಷರ ಮೆರವಣಿಗೆ
Next articleಬೈಕಿಗೆ ಕಾರು ಡಿಕ್ಕಿ: ಓಡಿಲ್ನಾಳದ ಯುವಕ ಸಾವು