ವಿಜಯಪುರ: ವೇಗವಾಗಿ ಬಂದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವಿಜಯಪುರದ ಜಿಲ್ಲಾ ಪಂಚಾಯತ್ ರಸ್ತೆಯಲ್ಲಿ ನಡೆದಿದೆ.
ಇಂಡಿ ತಾಲೂಕಿನ ಅಗರಖೇಡ ಗ್ರಾಮದ ನಿವಾಸಿ ವಕೀಲ ರವಿ ಮೇಲಿನಕೇರಿ(35) ಮೃತಪಟ್ಟಿರುವ ವ್ಯಕ್ತಿ ಎಂದು ತಿಳಿದು ಬಂದಿದ್ದು, ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಬಳಿಕ ಅರ್ಧ ಕಿಮೀ ವರೆಗೆ ವ್ಯಕ್ತಿಯನ್ನು ಎಳೆದುಕೊಂಡು ಹೋಗಿದೆ ಎನ್ನಲಾಗಿದೆ. ಕಾರು ಚಾಲಕ ವಾಹನ ಸಮೇತ ಪರಾರಿಯಾಗಿದ್ದು, ವಿಜಯಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.