ಬೈಕ್‌ ಅಪಘಾತ: ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಸಾವು

0
24

ಯಾದಗಿರಿ: ರಾಜ್ಯ ರಸ್ತೆ ಸಾರಿಗೆ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಮಕ್ಕಳು ಸೇರದಂತೆ ಒಂದೇ ಕುಟುಂಬದ ಐವರು ಮೃತಪಟ್ಟ ಘಟನೆ ನಡೆದಿದೆ.
ಸುರಪುರ ತಾಲೂಕಿನ ತಿಂಥಣಿ ಬಳಿ ಈ ಘಟನೆ ನಡೆದಿದ್ದು ಮೃತರನ್ನು ಯಾದಗಿರಿಯ ಶಹಾಪುರದ ಹಳಿಸಗರ ನಿವಾಸಿಗಳಾದ ಆಂಜನೇಯ(35) ಗಂಗಮ್ಮ(28) ಮತ್ತು ಅವರ ಪುತ್ರ 1 ವರ್ಷದ ಹನುಮಂತು ಮತ್ತು ಸಹೋದರನ ಮಕ್ಕಳಾದ ಪವಿತ್ರ(5) ಮತ್ತು ರಾಯಪ್ಪ(3) ಮೃತ ದುರ್ದೈವಿಗಳು. ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ.ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಮತ್ತಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲಿಂಗಸೂಗೂರು ಕಡೆಯಿಂದ ಚಿಂಚೋಳಿ ಕಡೆಗೆ ಹೊರಟಿದ್ದ ಬಸ್ಸೊಂದು ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಎದುರಿನಲ್ಲಿ ಚಲಿಸುತ್ತಿದ್ದ ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

Previous articleಚೀಟಿ ಬರೆದಿಟ್ಟು ಶಿಶು ಬಿಟ್ಟುಹೋದ ತಾಯಿ
Next articleಅಪಘಾತ: ಕ್ಯಾಮೆರಾಮ್ಯಾನ್ ಸಾವು