ಬೈಪಾಸ್ ರಸ್ತೆಯಲ್ಲಿ ಹೆಚ್ಚಿದ ಅಪಘಾತ: ಸೂಕ್ತ ಕ್ರಮಕ್ಕೆ ಸೂಚನೆ

ಬೆಂಗಳೂರು: ಕನಕಪುರ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಕನಕಪುರ ನಗರದ ಹೊರವಲಯದ ಬೈಪಾಸ್ ಜಂಕ್ಷನ್‌ಗಳಿಗೆ ಸಂಸದ ಡಾ.ಸಿ.ಎನ್.ಮಂಜುನಾಥ್ ಭೇಟಿ ನೀಡಿ ಪರಿಶೀಲಿಸಿದರು.
ನಗರದಿಂದ ಶಿವನಹಳ್ಳಿ ಕಡೆಗೆ ಮತ್ತು ತುಂಗಣಿ ಗ್ರಾಮಗಳಿಗೆ ಹಾದುಹೋಗುವ ಬೈಪಾಸ್ ರಸ್ತೆಯಲ್ಲಿ ಹೆಚ್ಚಿನ ಅಪಘಾತಗಳು ಸಂಭವಿಸುತ್ತಿದ್ದು ಈ ಬಗ್ಗೆ ಸಾರ್ವಜನಿಕರಿಂದ ದೂರು ಕೇಳಿಬಂದ ಹಿನ್ನಲೆ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳನ್ನು ಪರಿಶೀಲಿಸಿದೆ. ಈ ವೇಳೆ ಸ್ಥಳದಲ್ಲಿಯೇ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತನಾಡಿ ಆದಷ್ಟು ಬೇಗ ಈ ಬಗ್ಗೆ ಕ್ರಮವಹಿಸುವಂತೆ ಸೂಚಿಸಿದ್ದಾರೆ.