ಚಿತ್ರದುರ್ಗ: ಸಚಿವ ಬೈರತಿ ಸುರೇಶ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಹಾರನಕಟ್ಟೆ ಗ್ರಾಮದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆ ತುರ್ತು ಭೂಸ್ಪರ್ಶ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಹಾರನಕಟ್ಟೆ ಹೈಸ್ಕೂಲ್ ಮೈದಾನದಲ್ಲಿ ಹೆಲಿಕಾಪ್ಟರ್ ಭೂ ಸ್ಪರ್ಶ ಮಾಡಿದೆ. ಸಚಿವ ಬೈರತಿ ಸುರೇಶ್ ಮತ್ತು ಸ್ನೇಹಿತರು ಗದಗ ಜಿಲ್ಲೆಯ ಲಕ್ಷ್ಮೀಶ್ವರಕ್ಕೆ ತೆರಳುತ್ತಿದ್ದರು. ಮಾರ್ಗ ಮಧ್ಯೆ ತಾಂತ್ರಿಕ ದೋಷ ಕಂಡು ಬಂದಿದೆ. ಹೆಲಿಕಾಪ್ಟರ್ ದೋಷದಿಂದಾಗಿ ಮರಳಿ ಕಾರಿನಲ್ಲಿ ಬೆಂಗಳೂರಿಗೆ ವಾಪಾಸಾಗಿದ್ದಾರೆ.