Home ತಾಜಾ ಸುದ್ದಿ ಬೊಮ್ಮಾಯಿ ವಿರುದ್ಧ ಪ್ರಕರಣ

ಬೊಮ್ಮಾಯಿ ವಿರುದ್ಧ ಪ್ರಕರಣ

0

ಹಾವೇರಿ: ನಗರದ ವಿದ್ಯಾಸಂಸ್ಥೆಯೊಂದರಲ್ಲಿ ಅನುಮತಿ ಇಲ್ಲದೇ ಚುನಾವಣಾ ಪ್ರಚಾರ ಸಭೆ ನಡೆಸಿರುವ ಆರೋಪದ ಮೇರೆಗೆ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ವಿರುದ್ಧ ಹಾವೇರಿ ನಗರದ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಪ್ರಕರಣ ದಾಖಲಾಗಿದೆ.
ಏ. ೨೭ರಂದು ಬಸವರಾಜ ಬೊಮ್ಮಾಯಿ ಅವರು ನಗರದ ಆಯುರ್ವೇದ ಕಾಲೇಜಿನಲ್ಲಿ ಪ್ರಚಾರ ಸಭೆ ನಡೆಸಿದ್ದರು. ನೀತಿಸಂಹಿತೆ ಜಾರಿ ಇರುವ ಸಂದರ್ಭದಲ್ಲಿ ಪೂರ್ವಾನುಮತಿ ಇಲ್ಲದೇ ಹಾಗೂ ನೀತಿಸಂಹಿತೆ ಅನ್ವಯ ನಿಷೇಧಿತ ಪ್ರದೇಶವಾದ ವಿದ್ಯಾಸಂಸ್ಥೆಯಲ್ಲಿ ಚುನಾವಣಾ ಪ್ರಚಾರ ಸಭೆ ನಡೆಸಿದ್ದಾರೆ. ಅಲ್ಲದೇ ಫೇಸ್‌ಬುಕ್‌ನಲ್ಲಿ ಸಭೆಯ ಫೋಟೋ ಹಂಚಿಕೊಳ್ಳುವ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಕ್ಷಿಪ್ರ ಕಾರ್ಯಪಡೆ ಮುಖ್ಯಸ್ಥ ರಾಮಕೃಷ್ಣ ದೂರು ದಾಖಲಿಸಿದ್ದಾರೆ.

Exit mobile version