Home ತಾಜಾ ಸುದ್ದಿ ಬ್ಯಾಂಕ್‌ನಲ್ಲಿ ಅಗ್ನಿ ಅವಘಡ

ಬ್ಯಾಂಕ್‌ನಲ್ಲಿ ಅಗ್ನಿ ಅವಘಡ

0

ಮಂಗಳೂರು: ಬ್ಯಾಂಕ್‌ವೊಂದರಲ್ಲಿ ಶಾರ್ಟ್ ಸರ್ಕೀಟ್‌ನಿಂದ ಅಗ್ನಿ ಅವಘಡ ಸಂಭವಿಸಿದೆ.
ನಗರದ ಬಂಟ್ಸ್ ಹಾಸ್ಟೆಲ್ ಬಳಿಯ ಕರಂಗಲಪಾಡಿಯ ವಾಣಿಜ್ಯ ಕಟ್ಟಡವೊಂದರಲ್ಲಿರುವ ಬ್ಯಾಂಕ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ, ಶಾರ್ಟ್‌ ಸರ್ಕೀಟ್‌ನಿಂದ ಬ್ಯಾಂಕ್‌ನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಸ್ಥಳದಲ್ಲಿ ದಟ್ಟ ಹೊಗೆಯ ವಾತವರಣ ನಿರ್ಮಿತವಾಗಿದೆ.
ಬೆಂಕಿ ವ್ಯಾಪಿಸುತ್ತಿದ್ದಂತೆ ಸಿಬ್ಬಂದಿಗಳು ಹೊರ ಬಂದಿದ್ದಾರೆ. ಮಧ್ಯಾಹ್ನವಾದ್ದರಿಂದ ಗ್ರಾಹಕರ ಸಂಖ್ಯೆಯೂ ಕಡಿಮೆ ಇತ್ತು. ಹಾಗಾಗಿ ಭಾರೀ ಅನಾಹುತ ತಪ್ಪಿದೆ. ಆದರೂ, ಅಗ್ನಿ ಶಾಮಕ ದಳದ ಸಿಬಂದಿ ಸ್ಥಳಕ್ಕೆ ಭೇಟಿ ನೀಡಿದ್ದು, ಕಾರ್ಯಾಚರಣೆ ನಡೆಸುತ್ತಿದ್ದಾರೆ.

Exit mobile version