ಮಂಗಳೂರು : ಕೋಟೆಕಾರ್ ಸಹಕಾರಿ ಬ್ಯಾಂಕ್ನಲ್ಲಿ ಚಿನ್ನಾಭರಣ, ನಗದು ದರೋಡೆ ಕೇಸ್ಗೆ ಸಂಬಂಧಿಸಿದಂತೆ ಇದೀಗ ಮತ್ತೊಬ್ಬ ಆರೋಪಿ ಮೇಲೆ ಪೊಲೀಸರು ಗುಂಡಿನ ದಾಳಿ ಮಾಡಿದ್ದಾರೆ.
ಮುರುಗಂಡಿ ಥೇವರ್ ಗುಂಡೇಟು ತಗುಲಿದ ಆರೋಪಿ. ದರೋಡೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಮುರುಗಂಡಿ ಥೇವರ್ ಮತ್ತು ಯೋಶುವಾ ರಾಜೇಂದ್ರನ್ ಅವರನ್ನು ತಮಿಳುನಾಡಿನ ತಿರುನಲ್ವೇಲಿಯಲ್ಲಿ ಬಂಧಿಸಿ ಮಂಗಳೂರಿಗೆ ಕರೆತರಲಾಗಿತ್ತು. ನ್ಯಾಯಾಲಯವು ಆರೋಪಿಗಳನ್ನು ಫೆ.3ರ ವರೆಗೆ ಪೊಲೀಸರ ವಶಕ್ಕೆ ಒಪ್ಪಿಸಿತ್ತು. ಶನಿವಾರ ಮಧ್ಯಾಹ್ನ ಸ್ಥಳ ಮಹಜರು ನಡೆಸಲು ಸ್ಥಳಕ್ಕೆ ಕರೆದೊಯ್ಯಲಾಗಿತ್ತು. ಕರ್ನಾಟಕ-ಕೇರಳ ಗಡಿಭಾಗದ ಅಜ್ಜಿನಡ್ಕ ಸಮೀಪದಲ್ಲಿ ಸ್ಥಳ ಮಹಜರು ನಡೆಸುತ್ತಿದ್ದಾಗ ಆರೋಪಿ ಮುರುಗಂಡಿ ಥೇವರ್ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಆತನ ಕಾಲಿಗೆ ಗುಂಡು ಹಾರಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸದ್ಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.