ಬ್ಯಾಟಿಂಗ್ ಕೋಚ್ ಆಗಿ RCBಗೆ ಡಿಕೆ

0
6

ಬೆಂಗಳೂರು: ಕ್ರಿಕೆಟ್ ವೃತ್ತಿಜೀವನಕ್ಕೆ ನಿವೃತ್ತಿ ಘೋಷಿಸಿರುವ ದಿನೇಶ್ ಕಾರ್ತಿಕ್ ಆರ್​ಸಿಬಿ ಪರ ಬ್ಯಾಟಿಂಗ್ ಕೋಚ್/ಮೆಂಟರ್ ಆಗಿ ಹೊಸ ಇನಿಂಗ್ಸ್ ಆರಂಭಿಸಲಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಆರ್​ಸಿಬಿ ಪೋಸ್ಟ್‌ ಮಾಡಿದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ದಿನೇಶ ಕಾರ್ತಿಕ್‌ ಆಗಮನದ ಬಗ್ಗೆ ತಿಳಿಸಿದೆ. ಆದರೆ ಈ ಬಾರಿ ಆಟಗಾರನಾಗಿ ಅಲ್ಲ. ಬದಲಾಗಿ ಬ್ಯಾಟಿಂಗ್ ಕೋಚ್ ಆಗಿ ನೇಮಕವಾಗಿದ್ದಾರೆ. ಅದರಂತೆ ಐಪಿಎಲ್ 2025 ರಲ್ಲಿ ದಿನೇಶ್ ಕಾರ್ತಿಕ್ ಆರ್​ಸಿಬಿ ತಂಡದ ಬ್ಯಾಟಿಂಗ್ ಕೋಚ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ. ಈ ಹುದ್ದೆಯೊಂದಿಗೆ ಮೆಂಟರ್ ಆಗಿಯೂ ಕೂಡ ಕಾಣಿಸಿಕೊಳ್ಳಲಿದ್ದಾರೆ. ಇದೀಗ ಕ್ರಿಕೆಟ್ ವೃತ್ತಿಜೀವನಕ್ಕೆ ನಿವೃತ್ತಿ ಘೋಷಿಸಿರುವ ದಿನೇಶ್ ಕಾರ್ತಿಕ್ ಆರ್​ಸಿಬಿ ಪರ ಬ್ಯಾಟಿಂಗ್ ಕೋಚ್/ಮೆಂಟರ್ ಆಗಿ ಹೊಸ ಇನಿಂಗ್ಸ್ ಆರಂಭಿಸಲಿರುವುದು ವಿಶೇಷ. ದಿನೇಶ್‌ ಕಾರ್ತಿಕ್‌ ಕಾರ್ಯ ಅವರನ್ನು ಕ್ರಿಕೆಟ್ ನಿಂದ ಬೇರ್ಪಡಿಸಬಹುದು. ಆದರೆ ಕ್ರಿಕೆಟ್ ಅವರಿಂದ ದೂರವಾಗಲು ಸಾಧ್ಯವಿಲ್ಲ ಎಂದು ಆರ್‌ಸಿಬಿ ಸಾಮಾಜಿಕ ಜಾಲತಾಣದಲ್ಲಿ ಹೇಳಿದೆ.

Previous articleLPG ಸಿಲಿಂಡರ್‌ ಬೆಲೆ ಇಳಿಕೆ
Next articleದೇಶದಾದ್ಯಂತ ಇಂದಿನಿಂದ ಹೊಸ ಕಾನೂನು