Home ತಾಜಾ ಸುದ್ದಿ ಬ್ರ್ಯಾಂಡ್ ಬೆಂಗಳೂರು: ವೈಟ್ ಟಾಪಿಂಗ್ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ

ಬ್ರ್ಯಾಂಡ್ ಬೆಂಗಳೂರು: ವೈಟ್ ಟಾಪಿಂಗ್ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ

0

ಬೆಂಗಳೂರು: ‘ಬ್ರ್ಯಾಂಡ್ ಬೆಂಗಳೂರು, ಸುಗಮ ಸಂಚಾರ ಬೆಂಗಳೂರು’ ಪರಿಕಲ್ಪನೆಯಡಿ ಚಾಮರಾಜಪೇಟೆ, ಗಾಂಧಿನಗರ, ಮಲ್ಲೇಶ್ವರ, ಮಹಾಲಕ್ಷ್ಮೀಪುರಗಳಲ್ಲಿ ₹200 ಕೋಟಿ ವೆಚ್ಚದಲ್ಲಿ 19.67 ಕಿ.ಮೀ ವೈಟ್ ಟಾಪಿಂಗ್ ರಸ್ತೆ ನಿರ್ಮಾಣ ಕಾಮಗಾರಿಗೆ ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ. ಕೆ. ಶಿವಕುಮಾರ ಚಾಲನೆ ನೀಡಿ ಮಾತನಾಡಿರುವ ಅವರು, ಕಾಲಮಿತಿಯಲ್ಲಿ ಈ ಕಾಮಗಾರಿ ಪೂರ್ಣಗೊಳಿಸಲಾಗುವುದು. ಸಂಚಾರ ದಟ್ಟಣೆ ಸಮಸ್ಯೆ ಬಗೆಹರಿಸಲು 200 ಕಿ.ಮೀ ನಷ್ಟು ಹೊಸ ರಸ್ತೆ ನಿರ್ಮಾಣ ಮಾಡಲು ತೀರ್ಮಾನ ಮಾಡಿದ್ದು, ಉನ್ನತ ಗುಣಮಟ್ಟಕ್ಕಾಗಿ ವೈಟ್ ಟಾಪಿಂಗ್ ಮಾಡಲು ಸೂಚಿಸಲಾಗಿದೆ ಮಲ್ಲೇಶ್ವರಂ, ಮಹಾಲಕ್ಷ್ಮಿ ಲೇಔಟ್, ಚಾಮರಾಜಪೇಟೆ ಮತ್ತು ವಿಧಾನಸಭಾ ಕ್ಷೇತ್ರಗಳಲ್ಲಿ ವೈಟ್‌ ಟಾಪಿಂಗ್‌ ಹಾಗೂ ಪಾದಚಾರಿ ಮಾರ್ಗದ ನಿರ್ಮಾಣ ಕಾಮಗಾರಿಗೆ ಇಂದು ಭೂಮಿಪೂಜೆ ನೆರವೇರಿಸಿದೆ. 1800 ಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳುತ್ತಿರುವ 150 ಕಿ.ಮೀ ವ್ಯಾಪ್ತಿಯ ಮಹತ್ವಾಕಾಂಕ್ಷೆಯ ಯೋಜನೆ ಇದಾಗಿದ್ದು, 25 ವರ್ಷಗಳ ಕಾಲ ರಸ್ತೆ ಸುರಕ್ಷಿತವಾಗಿರಲಿದೆ. ಬ್ರ್ಯಾಂಡ್‌ ಬೆಂಗಳೂರು ಯೋಜನೆಯಡಿ ಹಲವಾರು ಕಾಮಗಾರಿಗಳನ್ನು ನಾವು ಕೈಗೊಳ್ಳುತ್ತಿದ್ದು, ಈ ಮೂಲಕ ಬೆಂಗಳೂರು ಜಾಗತಿಕ ಮಟ್ಟದಲ್ಲಿ ಇನ್ನಷ್ಟು ಎತ್ತರಕ್ಕೆ ಏರಲಿದೆ ಎಂದರು.

Exit mobile version