ಮಂಡ್ಯ: ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಜಮೀನಿನಲ್ಲಿ ಭತ್ತ ನಾಟಿ ಮಾಡಿದ್ದಾರೆ.
ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಅರಳಕುಪ್ಪೆ ಗ್ರಾಮದ ಲಕ್ಷ್ಮಣ ಎಂಬುವವರ ಗದ್ದೆಯಲ್ಲಿ ಭತ್ತ ನಾಟಿ ಮಾಡಿದ ಅವರು ಭತ್ತದ ನಾಟಿಗೂ ಮೊದಲು ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು ಭೂಮಿ ತಾಯಿ ಮಕ್ಕಳಾದ ನಮ್ಮೆಲ್ಲರಿಗೂ ಭೂಮಿಯೇ ಸರ್ವಸ್ವ. ಬೇಸಾಯವೇ ಬದುಕು. ಭತ್ತದ ನಾಟಿ ನನ್ನ ಮನೆಯ ಕಾರ್ಯಕ್ರಮವೇ ಆಗಿತ್ತು. ರೈತಾಪಿ ಜನರೊಂದಿಗೆ ಇಂತಹ ಸಾರ್ಥಕ, ಅನನ್ಯ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ನನ್ನಲ್ಲಿ ಧನ್ಯತೆಯ ಭಾವ ಉಂಟು ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶದ ಸಮಸ್ತ ಅನ್ನದಾತರಿಗೆ ಹೆಗಲು ಕೊಡುವ ಅನೇಕ ಕಾರ್ಯಕ್ರಮಗಳನ್ನು ಕೇಂದ್ರ ಸರಕಾರ ಜಾರಿಗೆ ತಂದಿದೆ ಎಂದು ಇದೇ ವೇಳೆ ನಾನು ಜನತೆಗೆ ಹೇಳಬಯಸುತ್ತೇನೆ ಎಂದಿದ್ದಾರೆ