Home ತಾಜಾ ಸುದ್ದಿ ಭದ್ರಾ ಮೇಲ್ಡಂಡೆ ಯೋಜನೆ: 5300 ಕೋಟಿ ರೂ. ಅನುದಾನ ಬಿಡುಗಡೆಗೆ ಮನವಿ

ಭದ್ರಾ ಮೇಲ್ಡಂಡೆ ಯೋಜನೆ: 5300 ಕೋಟಿ ರೂ. ಅನುದಾನ ಬಿಡುಗಡೆಗೆ ಮನವಿ

0

ನವದೆಹಲಿ: ರಾಜ್ಯದ ಭದ್ರಾ ಮೇಲ್ಡಂಡೆ ಯೋಜನೆ ಜಾರಿಗೆ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಘೋಷಣೆ ಮಾಡಿರುವ 5300 ಕೋಟಿ ರೂ. ಅನುದಾನವನ್ನು ಶೀಘ್ರ ಬಿಡುಗಡೆ ಮಾಡುವಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಾಗೂ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸಂಸದರ ನಿಯೋಗ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಂಸದರಾದ ಗೋವಿಂದ ಕಾರಜೋಳ, ವಿಶ್ವೇಶ್ವರ ಹೆಗಡೆ ಕಾಗೇರಿ, ಡಾ. ಕೆ. ಸುಧಾಕರ್, ಪಿ.ಸಿ. ಗದ್ದಿಗೌಡರ ಹಾಜರಿದ್ದರು.

Exit mobile version