Home ನಮ್ಮ ಜಿಲ್ಲೆ ಚಿತ್ರದುರ್ಗ ಭದ್ರಾ ಮೇಲ್ದಂಡೆ ಯೋಜನೆಗೆ ತ್ವರಿತ ಅನುಷ್ಠಾನಕ್ಕೆ ಆಗ್ರಹಿಸಿ ಚಿತ್ರದುರ್ಗ ಬಂದ್

ಭದ್ರಾ ಮೇಲ್ದಂಡೆ ಯೋಜನೆಗೆ ತ್ವರಿತ ಅನುಷ್ಠಾನಕ್ಕೆ ಆಗ್ರಹಿಸಿ ಚಿತ್ರದುರ್ಗ ಬಂದ್

0

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ನೇತೃತ್ವದಲ್ಲಿ ಇಂದು ಚಿತ್ರದುರ್ಗ ಜಿಲ್ಲೆ ಬಂದ್​ಗೆ ಕರೆ ಕೊಡಲಾಗಿದೆ.
ಚಿತ್ರದುರ್ಗ ಜಿಲ್ಲೆ ಸ್ವಯಂಪ್ರೇರಿತ ಬಂದ್‌ಗೆ ಕರೆ ನೀಡಲಾಗಿದ್ದು, ರೈತಪರ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು, ಪ್ರಗತಿಪರ ಸಂಘಟನೆಗಳು ಬಂದ್​ಗೆ ಬೆಂಬಲಿಸಿವೆ. ಇಂದು ಬೆಳಗ್ಗೆಯಿಂದ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಚಿತ್ರದುರ್ಗದ ಗಾಂಧಿ ವೃತ್ತದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಪ್ರತಿಭಟನೆ ಹಿನ್ನೆಲೆ ರೈತ ಮುಖಂಡರು ಜಮಾಯಿಸಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆ ಶೀಘ್ರ ಅನುಷ್ಠಾನಕ್ಕೆ ಆಗ್ರಹಿಸಿದ್ದಾರೆ. ಚಿತ್ರದುರ್ಗ ನಗರದಲ್ಲಿ ಬಹುತೇಕ ಅಂಗಡಿ ಮುಂಗಟ್ಟು ಬಂದ್ ಆಗಿವೆ.

Exit mobile version