Home ತಾಜಾ ಸುದ್ದಿ ಭವಾನಿ ರೇವಣ್ಣಗೆ ಜಾಮೀನು

ಭವಾನಿ ರೇವಣ್ಣಗೆ ಜಾಮೀನು

0

ಬೆಂಗಳೂರು: ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದ ಬಂಧನ ಭೀತಿಯಲ್ಲಿದ್ದ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.
ನ್ಯಾಯಾಲಯದ ಆದೇಶದಂತೆ ಸಿಐಡಿ ಕಚೇರಿಗೆ ಭವಾನಿ ರೇವಣ್ಣ ತೆರಳಿ ಎಸ್‌ಐಟಿ ತನಿಖಾಧಿಕಾರಿಗಳ ಮುಂದೆ ಹೇಳಿಕೆ ದಾಖಲಿಸಿದ್ದಾರೆ. ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಆಲಿಸಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಮುಂದಿನ ಶುಕ್ರವಾರದವರೆಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಅಲ್ಲದೇ ಶುಕ್ರವಾರ ಮಧ್ಯಾಹ್ನ ೧ ಗಂಟೆಗೆ ತನಿಖಾಧಿಕಾರಿ ಮುಂದೆ ಹಾಜರಾಗಬೇಕು, ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು. ಕೆ.ಆರ್.ನಗರ ತಾಲೂಕು ಹಾಗೂ ಹಾಸನ ಜಿಲ್ಲೆಗೆ ಹೋಗುವಂತಿಲ್ಲ. ತನಿಖಾಧಿಕಾರಿಗಳು ಭವಾನಿ ರೇವಣ್ಣರನ್ನು ಬಂಧಿಸಬಾರದು. ವಿಚಾರಣೆ ನೆಪದಲ್ಲಿ ಸಂಜೆ ೫ ಗಂಟೆ ನಂತರ ಇರಿಸಿಕೊಳ್ಳುವಂತಿಲ್ಲ ಎಂದು ಆದೇಶಿಸಿತ್ತು.
ರೇವಣ್ಣ ಅರ್ಜಿ ಮೂಂದೂಡಿಕೆ: ಮಾಜಿ ಸಚಿವ ಎಚ್.ಡಿ. ರೇವಣ್ಣ ವಿರುದ್ಧ ದಾಖಲಾಗಿರುವ ಎರಡು ಎಫ್‌ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜೂ.೧೪ಕ್ಕೆ ಹೈಕೋರ್ಟ್ ಮೂಂದೂಡಿದೆ.

Exit mobile version