ಭಾರತಕ್ಕೆ ೩ನೇ ಪದಕ ತಂದಿತ್ತ ಸ್ವಪ್ನಿಲ್ ಕುಸಾಲೆ

0
24

ಪ್ಯಾರಿಸ್: ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್ನ ೬ನೇ ದಿನದ ಕ್ರೀಡಾಕೂಟದಲ್ಲಿ ಭಾರತದ ಸ್ವಪ್ನಿಲ್ ಕುಸಾಲೆ ೫೦ ಮೀ. ರೈಫಲ್ ೩ ಪೊಸಿಶನ್‌ನಲ್ಲಿ ಭಾರತಕ್ಕೆ ಕಂಚಿನ ಪದಕ ಜಯಿಸಿದರು. ಇದು ಪ್ರಸಕ್ತ ಒಲಿಂಪಿಕ್‌ನಲ್ಲಿ ಭಾರತಕ್ಕೆ ಒಲಿದ ಮೂರನೇ ಪದಕವಾಗಿದೆ. ಈ ಮೂರು ಪದಕ ಕೂಡ ಶೂಟಿಂಗ್ ವಿಭಾಗದಲ್ಲಿ ದಾಖಲಾಗಿರುವುದು ವಿಶೇಷವಾಗಿದೆ.
ಗುರುವಾರ ನಡೆದ ಫೈನಲ್ ಪಂದ್ಯದಲ್ಲಿ ಸ್ವಪ್ನಿಲ್ ಅವರು ೪೫೧.೪ ಅಂಕ ಗಳಿಸಿ ಕಂಚಿನ ಪದಕ ತಮ್ಮದಾಗಿಸಿಕೊಂಡರು. ಕ್ರೀಡಾಕೂಟದ ೫ನೇ ದಿನ ನಡೆದಿದ್ದ ಅರ್ಹತಾ ಸುತ್ತಿನಲ್ಲಿ ಸ್ವಪ್ನಿಲ್ ಕುಸಾಲೆ ೭ನೇ ಸ್ಥಾನಿಯಾಗಿ ಫೈನಲ್ ಪ್ರವೇಶಿಸಿದ್ದರು. ಭೋಪಾಲ್‌ನಲ್ಲಿ ನಡೆದಿದ್ದ ಕೊನೆೆಯ ಅರ್ಹತಾ ಸುತ್ತಿನಲ್ಲಿ ಅವರು ಪ್ಯಾರಿಸ್ ಒಲಿಂಪಿಕ್ಸ್ ಅರ್ಹತೆ ಪಡೆದಿದ್ದರು. ೨೦೧೫ರ ಕುವೈತ್ ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್ ಜೂನಿಯರ್ ವಿಭಾಗದಲ್ಲಿ ಚಿನ್ನ, ೫೯ನೇ ಹಾಗೂ ೬೧ನೇ ರಾಷ್ಟ್ರೀಯ ಚಾಂಪಿಯನ್‌ಶಿಪ್‌ನಲ್ಲೂ ಚಿನ್ನ ಗೆದ್ದ ಸಾಧನೆ ಮಾಡಿದ್ದಾರೆ. ರೈಲ್ವೆಯಲ್ಲಿ ಟಿಕೆಟ್ ಕಲೆಕ್ಟರ್ ಆಗಿರುವ ಸ್ವಪ್ನಿಲ್ ಕುಸಾಲೆ ಇಂದು ಒಲಿಂಪಿಕ್ಸ್ ಕ್ರೀಡಾಕೂಟದ 50 ಮೀಟರ್ ರೈಫಲ್ ಸ್ಪರ್ಧೆಯಲ್ಲಿ ಫೈನಲ್ ಪ್ರವೇಶಿಸಿದ್ದ ಅವರು ಪ್ಯಾರಿಸ್ ಒಲಿಂಪಿಕ್ಸ್​ನ ಪುರುಷರ 50 ಮೀ ರೈಫಲ್ 3 ಸುತ್ತಿನಲ್ಲಿ ಸ್ವಪ್ನಿಲ್ ಕುಸಾಲೆ ಕಂಚಿನ ಪದಕ ಗೆದ್ದಿದ್ದಾರೆ.

Previous articleನೆರೆ ಹಾನಿ ಪ್ರದೇಶಗಳಿಗೆ ಬಿಜೆಪಿ ನಿಯೋಗ
Next articleಬೋರುಗುಡ್ಡೆ: ಮನೆ ಕುಸಿದು ಬಿದ್ದು ವೃದ್ಧೆ ಸಾವು