Home ಕ್ರೀಡೆ ಭಾರತಕ್ಕೆ ಚಾಂಪಿಯನ್ಸ್‌ ಟ್ರೋಫಿ

ಭಾರತಕ್ಕೆ ಚಾಂಪಿಯನ್ಸ್‌ ಟ್ರೋಫಿ

0

ದುಬೈ: ಮೂರನೇ ಬಾರಿಗೆ ಐಸಿಸಿ ಚಾಂಪಿಯನ್ಸ್‌ ಟ್ರೋಫಿಗೆ ಭಾರತ ಮುತ್ತಿಟ್ಟಿದೆ.
ನ್ಯೂಜಿಲೆಂಡ್‌ ವಿರುದ್ಧ ನಡೆದ ಫೈನಲ್‌ ಪಂದ್ಯದಲ್ಲಿ ಭಾರತ ನಾಲ್ಕು ವಿಕೆಟ್‌ಗಳ ಗೆಲುವು ಸಾಧಿಸುವ ಮೂಲಕ ಚಾಂಪಿಯನ್ಸ್‌ ಆಗಿ ಹೊರಹೊಮ್ಮಿತು.
ಟಾಸ್‌ ಗೆದ್ದು ಮೊದಲ ಬ್ಯಾಟಿಂಗ್‌ ಮಾಡಿದ ನ್ಯೂಜಿಲೆಂಡ್‌ 50 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 251 ರನ್‌ ಗಳಿಸಿತ್ತು. ಗೆಲುವಿನ ಗುರಿ ಬೆನ್ನಟ್ಟಿದ ಭಾರತ 49 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು ಗೆಲುವಿನ ಗುರಿ ತಲುಪಿತು.
ನಾಯಕ ರೋಹಿತ್‌ ಶರ್ಮಾ 76, ಶ್ರೇಯಸ್ಸ್‌ ಅಯ್ಯರ್‌ 48 ಮತ್ತು ಕೆ.ಎಲ್‌ ರಾಹುಲ್‌ ಅಜೇಯ 34ರನ್‌ ಗಳಿಸಿ ಗೆಲುವಿಗೆ ಕಾರಣರಾದರು.

Exit mobile version