Home ತಾಜಾ ಸುದ್ದಿ ಭಾರತಕ್ಕೆ ಮಾಲ್ಡೀವ್ಸ್ ಅಧ್ಯಕ್ಷ

ಭಾರತಕ್ಕೆ ಮಾಲ್ಡೀವ್ಸ್ ಅಧ್ಯಕ್ಷ

0

ನವದೆಹಲಿ: ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರು ಭಾನುವಾರ ಭಾರತಕ್ಕೆ ಬಂದಿದ್ದಾರೆ. ೪ ದಿನದ ಪ್ರವಾಸ ಕೈಗೊಂಡಿರುವ ಮುಯಿಝು ಅ.೧೦ರವರೆಗೆ ಭಾರತದ ಆತಿಥ್ಯ ಸ್ವೀಕರಿಸಲಿದ್ದಾರೆ. ಭಾನುವಾರ ವಿದೇಶಾಂಗ ಸಚಿವ ಜೈಶಂಕರ್ ಅವರನ್ನು ಭೇಟಿಯಾಗಿರುವ ಮಾಲ್ಡೀವ್ಸ್ ಅಧ್ಯಕ್ಷ ಮುಯಿಝು ಸೋಮವಾರ ಪ್ರಧಾನಿ ಮೋದಿ ಅವರ ಜೊತೆ ಮಾತುಕತೆ ನಡೆಸಲಿದ್ದಾರೆ. ಜೂನ್ ೯ರಂದು ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಧಾನಿ ಮೋದಿ ಮತ್ತು ಅವರ ಮಂತ್ರಿಮಂಡಲದ ಪ್ರಮಾಣವಚನ ಸಮಾರಂಭದಲ್ಲಿ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಭಾಗವಹಿಸಿದ್ದರು.

Exit mobile version