ಭಾರತ ಜಗತ್ತಿನ 3ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಲಿದೆ

0
36

ಧಾರವಾಡ: ಮುಂಬರುವ 2 ವರ್ಷದಲ್ಲಿ ಭಾರತ ಜಗತ್ತಿನ 3ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.
ಕೋಲ್ ಇಂಡಿಯಾ ಕಂಪನಿಯ ಸಹಕಾರದೊಂದಿಗೆ ಧಾರವಾಡದ ಶ್ರೀ ಎನ್.ಎ. ಮುತ್ತಣ್ಣ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ನಿರ್ಮಿಸಲಾಗುತ್ತಿರುವ ವಸತಿ ನಿಲಯ ಮತ್ತು ಭೋಜನಾಲಯದ ಭೂಮಿ ಪೂಜಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು ಮುಂಬರುವ 2 ವರ್ಷದಲ್ಲಿ ಭಾರತ ಜಗತ್ತಿನ 3ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಲಿದೆ. ಆಗ ಆಗತ್ಯ ಬೀಳುವ ಮಾನವ ಸಂಪನ್ಮೂಲಕ್ಕಾಗಿ ಪ್ರತಿಯೊಬ್ಬ ಹುಡುಗ ಹುಡುಗಿಯನ್ನು ಮಾನವ ಸಂಪನ್ಮೂಲವನ್ನಾಗಿಸಲು ಅವರಿಗೆ ಉತ್ತಮ ಶಿಕ್ಷಣ ಒದಗಿಸಿ, ಅವರಲ್ಲಿರುವ ಪ್ರತಿಭೆಯನ್ನು ಗುರುತಿಸಲು ಪ್ರಾರಂಭಿಸಿದ್ದೇವೆ. ಇದಕ್ಕೆ ನಮ್ಮ ಮಹತ್ತರವಾದ ಪ್ರೇರಣೆ ಪ್ರಧಾನಿ ನರೇಂದ್ರ ಮೋದಿ ಅವರು. ಅದರಂತೆಯೇ ನಾವು ಶಿಕ್ಷಣ ಕ್ಷೇತ್ರದಲ್ಲಿ ಮೂಲಸೌಕರ್ಯಗಳನ್ನು ಉತ್ತಮಗೊಳಿಸಿ ಸಜ್ಜಾಗುತ್ತಿದ್ದೇವೆ ಎಂದರು.

Previous articleಸರ್ಕಾರದ ಸಂಪನ್ಮೂಲ ಹೇರಳವಾಗಿ ಬಳಕೆಯಾಗಿದೆ
Next articleಉಪಚುನಾವಣೆಯಲ್ಲಿ ಗೆಲುವು: ಕಾಂಗ್ರೆಸ್ ವಿಜಯೋತ್ಸವ