ಚೆನ್ನೈ: ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ಭಾರತ 10 ವಿಕೆಟ್ ಭರ್ಜರಿ ಗೆಲುವು ಸಾಧಿಸಿದ್ದು, ಸರಣಿ ಸಮಬಲವಾಗಿದೆ. ಟಾಸ್ ಗೆದ್ದ ಭಾರತ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ಬಳಗ 17.1 ಓವರ್ಗಳಲ್ಲಿ 84 ರನ್ಗಳಿಗೆ ಆಲ್ಔಟ್ ಆಯಿತು. ಇನ್ನು ಸುಲಭ ಗುರಿ ಬೆನ್ನಟ್ಟಿದ ಭಾರತ ಪರ ಸ್ಮೃತಿ ಮಂಧಾನಾ 40 ಎಸೆತಕ್ಕೆ 54 ರನ್ ಬಾರಿಸಿದರೆ ಶಫಾಲಿ ವರ್ಮ 25 ಎಸೆತಕ್ಕೆ 27 ರನ್ ಬಾರಿಸಿದರು. ಇವರಿಬ್ಬರ ಅಬ್ಬರದ ಆಟದಿಂದಾಗಿ ತಂಡ ಇನ್ನೂ 55 ಎಸೆತಗಳು ಬಾಕಿ ಇರುವಂತೆಯೇ ವಿಕೆಟ್ ನಷ್ಟವಿಲ್ಲದೆ 88 ರನ್ ಬಾರಿಸಿ ಗೆಲುವು ಸಾಧಿಸಿತು.