ಭಾರಿ ಮಳೆ: ಜೂ. 17ರಂದು ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜಿಗೆ ರಜೆ ಘೋಷಣೆ

0
73

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಜೂ.17ರಂದು ಮಂಗಳವಾರ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜು, ಐಟಿಐ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ದ್ವಿತೀಯ ಪಿ.ಯು.ಸಿ ಪರೀಕ್ಷೆ-3 ಎಂದಿನಂತೆ ನಡೆಯಲಿದೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿಲ್ಲ.

Previous article10 ವರ್ಷ ಹಳೆಯದಾಗಿದ್ದಕ್ಕೆ ಮರುಗಣತಿ
Next articleರಷ್ಯಾದ ಹುತಾತ್ಮ ಯೋಧನಿಗೆ ಗೋಕರ್ಣದಲ್ಲಿ ಅಪರ ಕಾರ್ಯ