Home ನಮ್ಮ ಜಿಲ್ಲೆ ಕೊಪ್ಪಳ ಭಾರಿ ಮಳೆ: ನೆಲಕ್ಕುರುಳಿದ ವಿದ್ಯುತ್‌ ಕಂಬ, ಮರ

ಭಾರಿ ಮಳೆ: ನೆಲಕ್ಕುರುಳಿದ ವಿದ್ಯುತ್‌ ಕಂಬ, ಮರ

0

ಕೊಪ್ಪಳ: ಕುಷ್ಟಗಿ ತಾಲೂಕಿನಲ್ಲಿ ಬಿರುಗಾಳಿ ಸಹಿತ ಆರ್ಭಟಿಸಿದ ಮಳೆಯಲ್ಲಿ ವಿದ್ಯುತ್ ಕಂಬ ಸೇರಿದಂತೆ ಮರಗಳು ನೆಲಕ್ಕುರುಳಿದ ಘಟನೆ ನಡೆದಿದೆ.
ತಾಲೂಕಿನ ಮದಲಗಟ್ಟಿ ಗ್ರಾಮದ ಜಮೀನೊಂದರಲ್ಲಿ ವಿದ್ಯುತ್ ಪರಿವರ್ತಕ ಸಮೇತ ವಿದ್ಯುತ್ ಕಂಬ ಮುರಿದು ಬಿದ್ದಿದೆ. ಹಾಬಲಕಟ್ಟಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಳಿಯ ರಸ್ತೆ ಬದಿಯ ವಿದ್ಯುತ್ ಕಂಬ ಮುರಿದು ಬಿದ್ದಿದೆ.
ಹನಮಸಾಗರ ಸೀಮಾದಲ್ಲಿ ರೈತ ಮೊಹಮ್ಮದ್ ಸಿರಾಜುದ್ದೀನ್ ಮೂಲಿಮನಿ ಎಂಬುವರಿಗೆ ಸೇರಿದ ತೋಟದಲ್ಲಿನ ಮರಗಳು ಬಿದ್ದಿವೆ. ನರ್ಸರಿ ಪ್ಲಾಟ್ ಗಾಳಿ ಮಳೆಗೆ ಹಾನಿಯಾಗಿದ್ದು, ಹನುಮನಾಳ ಹೋಬಳಿಯಲ್ಲಿ ಮಳೆ ಗಾಳಿಗೆ ಎರಡು ಕುರಿಗಳು ಮೃತಪಟ್ಟ ಬಗ್ಗೆ ವರದಿಯಾಗಿದೆ.

Exit mobile version