ಭಾರೀ ಮಳೆಗೆ ಕುಸಿದು ಬಿದ್ದ ಮನೆ

0
27

ಕುಷ್ಟಗಿ: ಭಾರೀ ಮಳೆಗೆ ಮಣ್ಣಿನ ಮನೆ ಬಿದ್ದು, ಹಾನಿಯಾದ ಘಟನೆ ನವಲಹಳ್ಳಿಯಲ್ಲಿ ನಡೆದಿದೆ. ಸಂದೀಪ್ ನಗರ ಸೇರಿದಂತೆ ಹಲವಡೆ ಚರಂಡಿಗಳು ತುಂಬಿ ಹರಿದಿದ್ದು, ತಗ್ಗು ಪ್ರದೇಶಗಳಲ್ಲಿರುವ ಮನೆಯೊಳಗೆ ನೀರು ನುಗ್ಗಿ ಅಪಾರ ಹಾನಿಯಾಗಿದೆ.
ಬಹುತೇಕ ಚರಂಡಿಗಳು ತುಂಬಿ ರಸ್ತೆ ಮೇಲೆ ನೀರು ಹರಿಯುತ್ತಿದೆ. ನವಲಹಳ್ಳಿ ಗ್ರಾಮದ ಶರಬಣ್ಣ ಅವರಿಗೆ ಸೇರಿದ ಮಣ್ಣಿನ ಮನೆಯ ಮುಂಭಾಗದ ಗೋಡೆ ಕುಸಿದು ಬಿದ್ದಿದೆ. ಈ ಮನೆಯಲ್ಲಿ ಚಂದ್ರಶೇಖರಯ್ಯ ಹಿರೇಮಠ ಎನ್ನುವವರು ಬಾಡಿಗೆ ಇದ್ದು, ಯಾವುದೇ ಪ್ರಾಣಾಪಾಯವಾಗಿಲ್ಲ.
ಮನೆಯಲ್ಲಿ ಯಾರೂ ಇಲ್ಲದ ವೇಳೆ ಘಟನೆ ನಡೆದಿದೆ. ಮನೆಯಲ್ಲಿದ್ದ ದವಸ-ಧಾನ್ಯ, ಬಟ್ಟೆ ಸೇರಿದಂತೆ ಇನ್ನಿತರ ಸಾಮಗ್ರಿಗೆ ಹಾನಿಯಾಗಿದೆ. ಯಾವುದೇ ಪ್ರಾಣ ಹಾನಿ ಆಗಿಲ್ಲ ಎನ್ನಲಾಗಿದೆ.
ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Previous articleಸಿಡಿಲು ಬಡಿದು ಮಹಿಳೆ ಸಾವು
Next articleಸಿಡಿಲು ಬಡಿದು ಓರ್ವ ಸಾವು, ಐವರಿಗೆ ಆಘಾತ