ಭಾಲ್ಕಿ ಪಟ್ಟಣ ರೈಲ್ವೆ ಮೇಲ್ಸೇತುವೆಗೆ ಮನವಿ

0
9

ನವದೆಹಲಿ: ಭಾಲ್ಕಿ ಪಟ್ಟಣದಲ್ಲಿ ಸಮಸ್ಯೆ ಕುರಿತಂತೆ ಬೀದರ್ ಲೋಕಸಭಾ ಕ್ಷೇತ್ರದ ಸಂಸದ ಸಾಗರ ಖಂಡ್ರೆ ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು ಭಾಲ್ಕಿ ಪಟ್ಟಣದಲ್ಲಿರುವ ರೈಲ್ವೆ ಗೇಟ್ ಬಳಿ ಟ್ರಾಫಿಕ್ ಸಮಸ್ಯೆಯಿಂದಾಗಿ ಸಾಕಷ್ಟು ಜನರಿಗೆ ಸಮಸ್ಯೆಯಾಗುತ್ತಿರುವ ಬಗ್ಗೆ ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಮಸ್ಯೆ ಬಗ್ಗೆ ಸಚಿವರಿಗೆ ಮನವರಿಕೆ ಮಾಡಿ ರೈಲ್ವೆ ಗೇಟ್ ಬಳಿ ರೈಲ್ವೆ ಮೇಲ್ಸೇತುವೆ (Rail Over Bridge) ನಿರ್ಮಾಣಕ್ಕೆ ಅನುದಾನ ಒದಗಿಸುವಂತೆ ಮನವಿ ಮಾಡಿದೆನು. ಮಾನ್ಯ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು ಸಮಸ್ಯೆ ಪರಿಹಾರಕ್ಕೆ ಶೀಘ್ರ ಕ್ರಮ ಕೈಗೊಳ್ಳುವ ಭರವಸೆ ನೀಡಿದರು ಎಂದಿದ್ದಾರೆ

Previous article೪೦ ಕುರಿ ಕಳ್ಳತನ
Next articleಮೈಸೂರು ಚಲೋ ಪಾದಯಾತ್ರೆ ಬ್ರೇಕ್