ರಾಯಚೂರು: ಅಯೋಧ್ಯೆ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಸೋಮವಾರ ಸುಕ್ಷೇತ್ರ ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠದ ಆವರಣದಲ್ಲಿ ಶ್ರೀಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರಿಂದ ಅದ್ದೂರಿ ಶೋಭಾಯಾತ್ರೆ ಜರುಗಿತು. ಯಾತ್ರೆಯಲ್ಲಿ ಮುಸ್ಲಿಂ ಬಾಂಧವರು ಭಾಗಿಯಾಗಿ, ಶ್ರೀರಾಮನ ಭಾವಚಿತ್ರ, ರಾಮ ಮಂದಿರವಿರುವ ಬಾವುಟ ಹಿಡಿದು ಜೈ ಶ್ರೀರಾಮ್ ಘೋಷಣೆ ಕೂಗಿದ್ದು, ಶೋಭಾಯಾತ್ರೆ ಭಾವೈಕ್ಯತೆಗೆ ಸಾಕ್ಷಿಯಾಯಿತು.