ಬೆಂಗಳೂರು: ಐರಾವತ ಬಸ್ ಹಾಗೂ ಕಾರ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ನಡೆದಿದೆ.
ಮಂಡ್ಯ ತಾಲೂಕಿನ ತೂಬಿನಕೆರೆ ಗ್ರಾಮದ ಬಳಿಯ ಹೈವೇ ಎಕ್ಸಿಟ್ನಲ್ಲಿ ಈ ಘಟನೆ ನಡೆದಿದ್ದು. ಸತ್ಯಾನಂದ ರಾಜೇ ಆರಸ್ (51) ಅವರ ಪತ್ನಿ ನಿಶ್ಚಿತಾ (45), ಚಂದ್ರು(62) ಅವರ ಪತ್ನಿ ಸುವೇದಿನಿ ರಾಣಿ(50) ಮೃತರು. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.