ಭೀಕರ ಅಪಘಾತ: ನಾಲ್ವರು ಸ್ಥಳದಲ್ಲೇ ಮೃತ್ಯು

0
15

ಮೈಸೂರು: ಕೆಎಸ್​​ಆರ್​ಟಿಸಿ ಎಲೆಕ್ಟ್ರಿಕ್ ಬಸ್ ಹಾಗೂ ಜೀಪ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ, ಸ್ಥಳದಲ್ಲೇ ಮೂವರು ಅಸುನೀಗಿರುವ ಘಟನೆ ಹುಣಸೂರು ನಗರದ ಆರ್​ಟಿಒ ಕಚೇರಿಯ ಬಳಿ ಇಂದು ಬೆಳಿಗ್ಗೆ ನಡೆದಿದೆ. ವಿರಾಜಪೇಟೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಹಾಗೂ ಹುಣಸೂರಿನಿಂದ ಪಿರಿಯಾಪಟ್ಟಣಕ್ಕೆ ತೆರಳುತ್ತಿದ್ದ ಜೀಪ್ ಡಿಕ್ಕಿ ಆಗಿವೆ. ಡಿಕ್ಕಿಯ ರಭಸಕ್ಕೆ ಜೀಪ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬರು ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಹುಣಸೂರು ಗ್ರಾಮಾಂತರ ಠಾಣೆಯ ಪೋಲಿಸರು ಭೇಟಿ ನೀಡಿದ್ದು, ಮೃತರ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ.

Previous articleತಿರುಚಿರಾಪಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಇಂದು ಉದ್ಘಾಟನೆ
Next articleಸರ್ಕಾರ ಸಮಾಜಕ್ಕೆ ಯಾವ ಸಂದೇಶ ಕೊಡಲು ಹೊರಟಿದೆ?