ಭೀಕರ ಅಪಘಾತ: ಮೂವರು ಸಾವು

0
32

ಬೆಳಗಾವಿ: ಬೈಲಹೊಂಗಲ-ಬೆಳಗಾವಿ ಸಂಪರ್ಕಿಸುವ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಮೂವರು ಸಾವಿಗೀಡಾದ ಘಟನೆ ನಡೆದಿದೆ.
ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದ ಹೊರವಲಯದಲ್ಲಿ ಈ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಓರ್ವ ಮಗುವಿಗೆ ಗಂಭೀರ ಗಾಯವಾಗಿದೆ. ಇನ್ನೊಂದು ಕಾರಿನಲ್ಲಿದ್ದ ಮಾಜಿ ಶಾಸಕ ಆರ್.ವಿ. ಪಾಟೀಲ್ ಪುತ್ರ ಸೇರಿದಂತೆ ಮತ್ತೊಬ್ಬರು ಗಾಯಗೊಂಡಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟವರ ಶವಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಕುರಿತಂತೆ ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous articleಕಾನೂನಿಗೆ ತಲೆಬಾಗುತ್ತೇನೆ: ಸೋನು ನಿಗಮ್
Next articleಶಿರಸಿ ಮಾರಿಕಾಂಬಾ ದರ್ಶನ ಪಡೆದ ಉಪರಾಷ್ಟ್ರಪತಿ