Home ತಾಜಾ ಸುದ್ದಿ ಭೀಕರ ಅಪಘಾತ: ೧೪ ಜನ ಸಾವು ಬದುಕಿನ ಮಧ್ಯೆ ಹೋರಾಟ

ಭೀಕರ ಅಪಘಾತ: ೧೪ ಜನ ಸಾವು ಬದುಕಿನ ಮಧ್ಯೆ ಹೋರಾಟ

0


ಧಾರವಾಡ: ಇಲ್ಲಿಯ ಕ್ಯಾರಕೊಪ್ಪ ಬಳಿ ಕ್ರೂಸರ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ೧೬ ಜನರಿಗೆ ಗಾಯಗಳಾಗಿದ್ದು, ಈ ಪೈಕಿ ೧೪ ಜನ ತೀವ್ರವಾಗಿ ಗಾಯಗೊಂಡಿದ್ದಾರೆ.
ಧಾರವಾಡ ಹೊಸಯಲ್ಲಾಪೂರ ನಿವಾಸಿಗಳಾದ ಇವರು ಸಂಬಂಧಿಕರ ಅಂತಿಮ ಸಂಸ್ಕಾರಕ್ಕಾಗಿ ಕಲಕೇರಿಗೆ ಹೋಗಿ ಮರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಮರಕ್ಕೆ ಡಿಕ್ಕಿ ಹೊಡೆದಿದೆ.
ಇದರಿಂದ ೧೪ಕ್ಕೂ ಹೆಚ್ಚು ಜನರಿಗೆ ತೀವ್ರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್‌ಗೆ ದಾಖಲಿಸಲಾಗಿದೆ. ಈ ಪೈಕಿ ಮೂವರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

Exit mobile version