ತುಮಕೂರು: ಶಿರಾ ತಾಲೂಕಿನ ಚಿಕ್ಕನಾಯಕನಹಳ್ಳಿ ಬಳಿ ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿ ಮೂವರು ಮಹಿಳೆಯರು ಮೃತಪಟ್ಟು 26 ಮಂದಿ ಗಾಯಗೊಂಡಿದ್ದಾರೆ. ಗೋವಾದಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ ಬೆಳಗಿನ ಜಾವ ೪.೩೦ ರ ಸಮಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿರುವ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಲಾಗಿದ್ದು ಉಳಿದ ಗಾಯಾಳುಗಳಿಗೆ ಕಳ್ಳಂಬೆಳ್ಳ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ವಿ ಅಶೋಕ್ ಹಾಗೂ ಕಳ್ಳಂಬೆಳ್ಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಕಳ್ಳಂಬೆಳ್ಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ