Home News ಭೀಕರ ರಸ್ತೆ ಅಪಘಾತ : ಮೂವರು ಮೃತ

ಭೀಕರ ರಸ್ತೆ ಅಪಘಾತ : ಮೂವರು ಮೃತ

ಚಿತ್ರದುರ್ಗ: ಬೆಳಂ ಬೆಳಗ್ಗೆ ಸಂಭವಿಸಿದ ಲಾರಿ ಅಪಘಾತದಲ್ಲಿ ಮೂವರು ಮೃತಪಟ್ಟ ಘಟನೆ ನಡೆದಿದೆ.
ತಾಲೂಕಿನ ಸಿಬಾರ ಗ್ರಾಮದ ಹೆದ್ದಾರಿರಯಲ್ಲಿ ಈ ಘಟನೆ ನಡೆದಿದೆ, ಲಾರಿಯೊಂದು ಟೈರ್ ಸ್ಫೋಟಗೊಂಡ ಪರಿಣಾಮ ರಸ್ತೆ ಬದಿ ನಿಂತಿತ್ತು. ಚಾಲಕ ಅದರಿಂದ ಇಳಿದು ಬೇರೆ ಟೈರ್ ಅಳವಡಿಸುವ ಕೆಲಸ ಮಾಡುತ್ತಿದ್ದ ವೇಳೆ, ಹೆದ್ದಾರಿಯಲ್ಲಿ ಬಂದ ಮತ್ತೊಂದು ಲಾರಿ ಅದಕ್ಕೆ ಡಿಕ್ಕಿಯಾಗಿದೆ. ಲಾರಿ ಚಾಲಕ ಹಾಗೂ ಕಲ್ಲಂಗಡಿ ಸಾಗಿಸುತ್ತಿದ್ದ ಟ್ರಕ್‌ನಲ್ಲಿದ್ದ ಇಬ್ಬರು ಸಾವಿಗೀಡಾಗಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತರ ಗುರುತು ಇನ್ನು ಪತ್ತೆಯಾಗಿಲ್ಲ. ಈ ಘಟನೆ ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Exit mobile version