ಭೀಕರ ರಸ್ತೆ ಅಪಘಾತ: ಮೂವರ ಸಾವು

0
10

ಕಲಬುರಗಿ: ಬೈಕ್ ಮತ್ತು ಕೆಎಸ್ ಆರ್ ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕನಲ್ಲಿದ್ದ ಮೂವರು ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಜಿಲ್ಲೆಯ ಕಮಲಾಪುರ ಬಳಿ ಭಾನುವಾರ ತಡರಾತ್ರಿ ಸಂಭವಿಸಿದೆ.

ಕಮಲಾಪುರ ತಾಲೂಕಿನ ಬೆಂಗಳೂರು ಕ್ರಾಸ್ ಬಳಿ ಘಟನೆ ನಡೆದಿದೆ.

ಕಮಲಾಪುರ ತಾಲ್ಲೂಕಿನ ಕಿಣ್ಣಿ ಸಡಕ್ ಗ್ರಾಮದ ನಿವಾಸಿಗಳಾದ ಯುವಕರಾದ ವಿಶಾಲ ಜಾಧವ್ (17), ಚಂದ್ರಕಾಂತ (20) ಮತ್ತು ಸಮೀರ್ (23) ಮೃತಪಟ್ಟರು ಎಂದು ಗುರುತಿಸಲಾಗಿದೆ.

ಕಿಣ್ಣಿ ಸಡಕ್ ಗ್ರಾಮದಿಂದ ಕಲಬುರಗಿಗೆ ಬರುತ್ತಿದ್ದ ಬೈಕ್ ಮತ್ತು ಕಲಬುರಗಿಯಿಂದ ಹುಮನಾಬಾದ್ ಕಡೆ ತೆರಳುತ್ತಿದ್ದ ಬಸ್ ನಡುವೆ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಕಮಲಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Previous articleಸೆಕ್ಯೂರಿಟಿ ಏಜೆನ್ಸಿ ಮೂಲಕ ಶಿಕ್ಷಕರ ಅಕ್ರಮ ನೇಮಕಾತಿ
Next articleಮಧ್ಯಂತರ ಜಾಮೀನು ಅವಧಿ ವಿಸ್ತರಿಸಲು ಕೇಜ್ರಿವಾಲ್ ಮನವಿ