ಭೂ ಕಬಳಿಕೆ: ತಹಶೀಲ್ದಾರ್ ಸೇರಿ 13 ಜನರ ಮೇಲೆ ಎಫ್‌ಐಆರ್

0
21

ಗದಗ: ಬೇ ವಾರ್ಸಾ ಜಮೀನುಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಜಮೀನು ಕಬಳಿಸಲು ಪ್ರಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಡರಗಿಯ ಹಿಂದಿನ ತಹಶೀಲ್ದಾರ್ ಸೇರಿದಂತೆ ನಾಲ್ಕು ಜನ ಸರಕಾರಿ ಅಧಿಕಾರಿಗಳು, ಒಂಬತ್ತು ಜನ ಖಾಸಗಿ ವ್ಯಕ್ತಿಗಳ ಮೇಲೆ ಮುಂಡರಗಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಇಬ್ಬರು ಸರಕಾರಿ ನೌಕರರ ಮೇಲೆ ಪ್ರಕರಣ ದಾಖಲಿಸಲು ಅನುಮತಿ ಕೋರಿ ಸಕ್ಷಮ ಪ್ರಾಧಿಕಾರಕ್ಕೆ ಲೋಕಾಯುಕ್ತ ಪೊಲೀಸರು ಪತ್ರ ಬರೆದಿದ್ದಾರೆ. ಈ ಪ್ರಕರಣದಲ್ಲಿ ಹಿಂದಿನ ತಹಶೀಲ್ದಾರ್ ಮತ್ತು ಇನ್ನೋರ್ವ ವ್ಯಕ್ತಿ ಪ್ರಕರಣದ ವಿಚಾರಣೆಗೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ.

Previous articleಮಂತ್ರ ಮಾಂಗಲ್ಯ ವಿವಾಹ ಪ್ರೋತ್ಸಾಹಿಸೋಣ
Next articleಮೈಕ್ರೋ ಫೈನಾನ್ಸ್ ಸಂಸ್ಥೆಗಳ ದಬ್ಬಾಳಿಕೆ ತಡೆಗೆ ಸರ್ಕಾರದ ಕ್ರಮ