ಭೂ ಕುಸಿತ ತಡೆಗೆ ಶಾಶ್ವತ ಪರಿಹಾರ ಯೋಜನೆ

ಬೆಳಗಾವಿ (ಸುವರ್ಣಸೌಧ) : ಈ ವರ್ಷ ಭೂ ಕುಸಿತ ಪ್ರಕರಣ ನಿರೀಕ್ಷೆಗಿಂತ ಹೆಚ್ಚಾಗಿದೆ. ಕಾರವಾರದ ಘಟನೆ ಆಘಾತಕಾರಿಯಾಗಿದೆ. ಮಲೆನಾಡು ಭಾಗದಲ್ಲೂ ಸಣ್ಣಪುಟ್ಟ ಭೂ ಕುಸಿತದ ಘಟನೆ ಸಂಭವಿಸಿದೆ. ಈ ನಿಟ್ಟಿನಲ್ಲಿ ಭೂ ಕುಸಿತವನ್ನು ತಡೆಗಟ್ಟಲು ಶಾಶ್ವತ ಯೋಜನೆ ರೂಪಿಸಲಾಗಿದೆ ಎಂದು ಸದನಕ್ಕೆ ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ನೀಡಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮಾತನಾಡಿದ ಅವರು “ಭೂ ಕುಸಿತ ತಡೆಗೆ ಶಾಶ್ವತ ಪರಿಹಾರ ನೀಡುವ ನಿಟ್ಟಿನಲ್ಲಿ ಸಿಎಂ ಜೊತೆ ಚರ್ಚಿಸಿ ಅವರ ಸೂಚನೆ ಹಿನ್ನೆಲೆ ಎರಡೂವರೆ ವರ್ಷದ ಅವಧಿಗೆ ರೂ.400 ಕೋಟಿ ರೂಪಾಯಿ ವೆಚ್ಚದಲ್ಲಿ ಭೂ ಕುಸಿತ ತಡೆಗಟ್ಟುವ ಕಾಮಗಾರಿ ಕೈಗೆತ್ತಿಕೊಳ್ಳಬೇಕು ಎಂದು ತೀರ್ಮಾನಿಸಿದ್ದೇವೆ. ಭೂ ಕುಸಿತಕ್ಕೆ ಒಳಗಾಗಬಹುದಾದ ಪ್ರದೇಶಗಳ ಬಗ್ಗೆ ನ್ಯಾಷನಲ್ ಜಿಯೋಲಾಜಿಕಲ್ ಸರ್ವೇ ಎಂಬ ಕೇಂದ್ರ ಸರ್ಕಾರದ ಸಂಸ್ಥೆಯಿAದ ವರದಿ ತರಿಸಲಾಗಿದೆ. ಆ ವರದಿಯಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಸೇರಿದಂತೆ 06 ಜಿಲ್ಲೆಗಳ 863 ಗ್ರಾಮ ಪಂಚಾಯಿತಿಗಳನ್ನು ಭೂ ಕುಸಿತ ಉಂಟಾಗಬಹುದಾದ ಪ್ರದೇಶಗಳು ಎಂದು ಗುರುತಿಸಲಾಗಿದೆ. ಈ ಜಿಲ್ಲೆಗಳಲ್ಲಿ ಭೂ ಕುಸಿತ ತಡೆಯುವ ಸಂಬAಧಿ ಯೋಜನೆಗಳ ಕುರಿತು ಈಗಾಗಲೇ ಎಲ್ಲಾ ಜಿಲ್ಲಾಧಿಕಾರಿಗಳಿಂದ ವರದಿ ತರಿಸಿಕೊಳ್ಳಲಾಗಿದೆ. ರೂ. 425 ಕೋಟಿ ವೆಚ್ಚದ ಯೋಜನೆಗಳಿಗೆ ಜಿಲ್ಲಾಧಿಕಾರಿಗಳು ಪ್ರಸ್ತಾವನೆ ಸಲ್ಲಿಸಿದ್ದಾರೆ. ಭೂ ಕುಸಿತ ತಡೆಗಟ್ಟುವ ಕಾಮಗಾರಿಗೆ ಹಣ ನೀಡಲು ಸರ್ಕಾರ ಒಪ್ಪಿಗೆ ಸೂಚಿಸಿದೆ. ಅದರ ಭಾಗವಾಗಿ ತಕ್ಷಣ ರೂ.152 ಕೋಟಿ ಹಣವನ್ನು ವಿವಿಧ ಕಾಮಗಾರಿಗಳಿಗೆ ಮಂಜೂರು ಮಾಡಲಾಗಿದೆ. ಇದಲ್ಲದೆ, ಮಳೆ ಹೆಚ್ಚಾದಾಗ ನಗರ ಪ್ರದೇಶಗಳಲ್ಲಿ ನೀರನ್ನು ಹೊರಹಾಕುವ ಮೂಲಭೂತ ವ್ಯವಸ್ಥೆ ಇಲ್ಲ. ಇದೂ ಸಹ ಪ್ರವಾಹಕ್ಕೆ ಕಾರಣವಾಗಿದ್ದು, ಇದಕ್ಕೆ ಸಂಬAಧಿಸಿದAತೆ ರೂ. 184 ಕೋಟಿ ಮೌಲ್ಯದ 259 ಕಾಮಗಾರಿಗಳಿಗೆ ತಕ್ಷಣ ಅನುಮೋದನೆ ನೀಡಲಿದ್ದೇವೆ ಎಂದರು.