Home ತಾಜಾ ಸುದ್ದಿ ಭೋಗಸ್ ಬಿಲ್ : ಪುರಸಭೆ ಮುಖ್ಯಾಧಿಕಾರಿ ಅಮಾನತ್ತಿಗೆ ಆಗ್ರಹ

ಭೋಗಸ್ ಬಿಲ್ : ಪುರಸಭೆ ಮುಖ್ಯಾಧಿಕಾರಿ ಅಮಾನತ್ತಿಗೆ ಆಗ್ರಹ

0

ಮುದ್ದೇಬಿಹಾಳ: ಪಟ್ಟಣದ ಇಂದಿರಾನಗರದಲ್ಲಿ ಪುರಸಭೆ ವತಿಯಿಂದ ಬೋರ್‌ವೆಲ್ ಕೊರೆದು ಮೋಟರ್ ಪಂಪ್ ಸೆಟ್ ಆಳವಡಿಸಿರುವದಾಗಿ ಹೇಳಿ ಪುರಸಭೆಯಲ್ಲಿ 3 ಲಕ್ಷ ರೂಪಾಯಿಗಳ ಬಿಲ್ ತೆಗೆದು ಪರಿಶಿಷ್ಟ ಜಾತಿಯ ಜನತೆಗೆ ಮತ್ತು ಸರ್ಕಾರಕ್ಕೆ ಮೋಸ ಮಾಡಿದ್ದು ಕೂಡಲೇ ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಪಟ್ಟಣದ ಸಂಗಮೇಶ ನಗರದ ಪುರಸಭೆ ಸದಸ್ಯ ವಿರೇಶ ಹಡಲಗೇರಿ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.ಈ ಕುರಿತು ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ವಿರೇಶ, ಇಂದಿರಾನಗರದಲ್ಲಿ ಕಳೆದ ಒಂದು ವರ್ಷದಿಂದ ಯಾವುದೇ ಬೋರ್‌ವೆಲ್ ಕೊರೆದಿರುವದಿಲ್ಲ ಎಂದು ಸಾರ್ವಜನಿಕರು ತಿಳಿಸಿದ್ದಾರೆ. ನಾನೂ ಖುದ್ದಾಗಿ ಇಂದಿರಾ ನಗರಕ್ಕೆ ಭೆಟಿ ನೀಡಿ ಪರಿಶೀಲಿಸಿದಾಗ ಯಾವುದೇ ಬೋರ್‌ವೆಲ್ ಕೊರೆದಿರುವದಿಲ್ಲ. ಇದು ಪರಿಶಿಷ್ಟ ಜಾತಿಯ ಜನತೆಗೆ ಮತ್ತು ಸರ್ಕಾರಕ್ಕೆ ಮೋಸ ಎಸಗಿದ್ದು ಇವರ ಮೇಲೆ ಶಿಸ್ತಿನ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ, ನಗರಾಭಿವೃದ್ಧಿ ಯೋಜನಾಧಿಕಾರಿಗಳಿಗೆ, ಜಿಲ್ಲಾ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಪೊಲೀಸ್ ಉಪಾಧೀಕ್ಷರಿಗೆ ಮನವಿ ಪತ್ರ ಸಲ್ಲಿಸಿದ್ದೇನೆ. ಸಂಬಂಧಿಸಿದ ಅಧಿಕಾರಿಗಳು ಕೂಡಲೇ ತನಿಖೆ ನಡೆಸಿ ಮುಖ್ಯಾಧಿಕಾರಿಯನ್ನು ಅಮಾನತ್ತು ಮಾಡಬೇಕು ಎಂದಿದ್ದಾರೆ.

Exit mobile version