Home ಅಪರಾಧ ಭ್ರೂಣಲಿಂಗ ಪತ್ತೆ ದಂಧೆ: ಮೂವರ ಬಂಧನ

ಭ್ರೂಣಲಿಂಗ ಪತ್ತೆ ದಂಧೆ: ಮೂವರ ಬಂಧನ

0

ಮಂಡ್ಯ: ಭ್ರೂಣಲಿಂಗ ಪತ್ತೆ, ದಂಧೆ ಮಂಡ್ಯದಲ್ಲಿ ಪತ್ತೆಯಾಗಿದೆ. ಪಾಂಡವಪುರ ಆರೋಗ್ಯ ಇಲಾಖೆಯ ಕಾಲೋನಿಯಲ್ಲಿ ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ನಡೆಯುತ್ತಿರುವ ವಿಚಾರ ತಿಳಿದ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಮೋಹನ್, ತಾಲೂಕು ಆರೋಗ್ಯ ಅಧಿಕಾರಿ ಡಾ.ಅರವಿಂದ್ ಮತ್ತು ಪೊಲೀಸರು ಜಂಟಿಯಾಗಿ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಗರ್ಭಪಾತಕ್ಕೆ ಬಂದಿದ್ದ ಮೈಸೂರು ಮೂಲದ ಮಹಿಳೆಯನ್ನು ರಕ್ಷಣೆ ಮಾಡಲಾಗಿದೆ. ದಾಳಿ ವೇಳೆ ಗರ್ಭಪಾತ ಮಾಡುವ ಯಂತ್ರೋಪಕರಣಗಳು ‌ಜಪ್ತಿ ಮಾಡಿದ್ದಾರೆ. ಕೃತ್ಯದಲ್ಲಿ ಭಾಗಿಯಾಗಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪಾಂಡವಪುರ ತಾಲೂಕು ಆಸ್ಪತ್ರೆ ಆ್ಯಂಬುಲೆನ್ಸ್​ ಚಾಲಕ ಆನಂದ್, ಅದೇ ಆಸ್ಪತ್ರೆಯ ಹೊರಗುತ್ತಿಗೆ ಡಿ ಗ್ರೂಪ್ ಸಿಬ್ಬಂದಿ ಅಶ್ವಿನಿ ಹಾಗೂ ಮತ್ತೊಬ್ಬ ಮಹಿಳೆಯನ್ನು ವಶಕ್ಕೆ ಪಡೆಯಲಾಘಿದೆ. ಚಾಲಕ ಆನಂದ್​ಗೆ ನೀಡಲಾಗಿದ್ದ ಸರ್ಕಾರಿ ವಸತಿ ಗೃಹದಲ್ಲಿಯೇ ಈ ಕೃತ್ಯ ನಡೆಯುತ್ತಿತ್ತು ಎಂದು ತಿಳಿದುಬಂದಿದೆ. ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಪ್ರಕರಣ ದಾಖಲಾಗಿದೆ.

Exit mobile version