ಮಂಗನ ಕಾಯಿಲೆ ಓರ್ವ ವ್ಯಕ್ತಿ ಬಲಿ

0
13

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ತಾಲೂಕುಗಳಲ್ಲಿ ಮಂಗನ ಕಾಯಿಲೆ (ಕೆಎಫ್‌ಡಿ) ವ್ಯಾಪಕವಾಗಿ ಹರಡುತ್ತಿದ್ದು ಓರ್ವ ವ್ಯಕ್ತಿಯನ್ನು ಬಲಿ ಪಡೆದುಕೊಂಡಿದೆ. ಇದುವರೆಗೂ ಮಂಗನ ಕಾಯಿಲೆಗೆ ಮೂರ್ವರು ಮೃತಪಟ್ಟಿದ್ದಾರೆ.
ಕೊಪ್ಪ ತಾಲೂಕು ಬಾಳೆಹೊನ್ನೂರು ಸಮೀಪದ ಮೇಲ್‌ಪಾಲ್‌ನ ಬಸವ (೭೦) ಅವರು ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ. ಕಳೆದ ಕೆಲವು ದಿನಗಳಿಂದ ಬಸವ ಅವರಿಗೆ ಜ್ವರ, ತಲೆನೋವು, ಸುಸ್ತು ಕಾಣಿಸಿಕೊಂಡಿದ್ದು, ಕೊಪ್ಪ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದರು.
ರಕ್ತದ ಮಾದರಿಯನ್ನು ಸಂಗ್ರಹಿಸಿದ ಆಸ್ಪತ್ರೆ ಸಿಬ್ಬಂದಿಗಳು ಶಿವಮೊಗ್ಗದ ಪ್ರಯೋಗಾಲಯಕ್ಕೆ ರವಾನಿಸಿದ್ದರು. ರಕ್ತ ಪರೀಕ್ಷೆಯಲ್ಲಿ ಮಂಗನ ಕಾಯಿಲೆ ದೃಢಪಟ್ಟಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.ಇದರೊಂದಗೆ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಮೂರ್ವರನ್ನು ಬಲಿ ಪಡೆದುಕೊಂಡಿದೆ.

Previous articleಎರಡೂ ರಾಷ್ಟ್ರೀಯ ಪಕ್ಷಗಳು ಬಾಯಿ ಮುಚ್ಚಿಕೊಂಡು ಕೂರಬೇಕು
Next articleಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನತೆ