ಮಂಗಳೂರು: ಇಂದು ದೇಶಾದ್ಯಂತ ಮುಸಲ್ಮಾನರ ಪವಿತ್ರ ಹಬ್ಬ ಈದ್ ಉಲ್ ಫಿತರ್(ರಂಜಾನ್) ಆಚರಿಸಲಾಗುತ್ತಿದೆ.
ಮಂಗಳೂರಿನ ಬಾವುಟಗುಡ್ಡೆ ಈದ್ಗಾ ಮಸೀದಿಯಲ್ಲಿ ವಿಶೇಷ ನಮಾಜ್ ನೆರೆವೇರಿತು. ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಕೂಡ ವಿಶೇಷ ಪ್ರಾರ್ಥನೆಯಲ್ಲಿ ಭಾಗವಹಿಸಿ ಶುಭ ಹಾರೈಸಿದರು. ಜಿಲ್ಲೆಯ ಬಹುತೇಕ ಎಲ್ಲಾ ಮಸೀದಿ-ಈದ್ಗಾಗಳಲ್ಲಿ ವಿಶೇಷ ನಮಾಝ್, ಪ್ರವಚನ ಬಳಿಕ ಪರಸ್ಪರ ಹಸ್ತಲಾಘವ, ಆಲಿಂಗನ ಮೂಲಕ ಹಬ್ಬದ ಶುಭಾಶಯ ವಿನಿಮಯ ಹಾಗೂ ಮನೆಗಳಲ್ಲಿ ಹಬ್ಬದ ಸಂಭ್ರಮ ಕಂಡು ಬಂತು. ಎಳೆಯ ಮಕ್ಕಳಿಂದ ಹಿಡಿದು ಹಿರಿಯರ ಸಹಿತ ಉಪವಾಸಿಗರು ಹೊಸ ಬಟ್ಟೆಬರೆ ಧರಿಸಿ, ಅತ್ತರ್ ಹಚ್ಚಿ, ವಿಶಿಷ್ಟ ಬಗೆಯ ತಿಂಡಿ-ತಿನಿಸು ತಿಂದು ಹಬ್ಬವನ್ನು ಅತ್ಯಂತ ಶ್ರದ್ಧೆಯಿಂದ ಸಂಭ್ರಮಿಸಿದರು.