ಮಂಗಳೂರು – ಮಡಗಾಂವ್ ಪ್ರಥಮ ಪ್ರಯಾಣ ಆರಂಭಿಸಿದ ವಂದೇ ಭಾರತ್

0
13

ಮಂಗಳೂರು: ಪ್ರಧಾನ ನಗರಗಳನ್ನು ಜೋಡಿಸುವ ಸೆಮಿ ಹೈ ಸ್ಪೀಡ್ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಮಂಗಳೂರು ಸೆಂಟ್ರಲ್ ನಿಲ್ದಾಣ ದಿಂದ ಮಡಗಾಂವ್ ಗೆ ಪ್ರಥಮ ಪ್ರಯಾಣ ಶನಿವಾರ ಆರಂಭಿಸಿತು.

ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರು – ಮಡಗಾಂವ್ ಸೇರಿ 6 ವಂದೇ ಭಾರತ್ ಹಾಗೂ 2 ಅಮೃತ್ ಭಾರತ್ ರೈಲುಗಳಿಗೆ ಏಕ ಕಾಲದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಹಸಿರು ನಿಶಾನೆ ತೋರಿದರು.
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಆಯೋಜಿಸಲಾದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಂಸದ ನಳಿನ್ ಕುಮಾರ್ ಮಾ ತನಾಡಿ , ದೇಶದಲ್ಲಿ 2014 ರ ಬಳಿಕ ಪರಿವರ್ತನೆ ಯುಗ ಆರಂಭವಾಗಿದೆ. ರೈಲ್ವೆ ಇಲಾಖೆಯಲ್ಲಿ ಅದ್ಭುತ
ಪರಿವರ್ತನೆ , ಆಮೂಲಾಗ್ರ ಬದಲಾವಣೆ ಆಗಿದೆ ಎಂದರು.
ಮಂಗಲೂರಿನಿಂದ ಬೆಂಗಳೂರಿಗೆ ವಂದೇ ಭಾರತ್ ಬೇಡಿಕೆ ಇದೆ. ರೈಲ್ ಹಳಿ ವಿದ್ಯು ದ್ದೀಕರನ ಆಗುತ್ತಿದೆ. ಮಾರ್ಚ್ ನಲ್ಲಿ ಪೂರ್ಣ ಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ , ಎ ಪ್ರಿಲ್ ನಲ್ಲಿ ಬೆಂಗಳೂರಿಗೆ ವಂದೇ ಭಾರತ್ ಆರಂಭ ಆಗಲಿದೆ ಎಂದು ನಳಿನ್ ಹೇಳಿದರು
ಶಾಸಕ ವೇದವ್ಯಾಸ ಕಾಮತ್,
35 ವರ್ಷಗಳಲ್ಲಿ ಹೊಸ ಫ್ಲಾಟ್ ಫಾರ್ಮ್ ಆಗಿರಲಿಲ್ಲ. ಇದೀಗ 4 ಮತ್ತು 5 ಫ್ಲ್ಯಾಟ್ ಫಾರ್ಮ್ ಆಗಿದೆ. ಇದು ಅಭೂತಪೂರ್ವ ಅಭಿವೃದ್ಧಿ ಎಂದು ಹೇಳಿದರು.
ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಶಾಸಕ ಡಾ. ಭಾರತ್ ಶೆಟ್ಟಿ, ಉಪ ಮೇಯರ್ ಸುನೀತ, ಮನಪಾ ಸದಸ್ಯ ವಿನಯ್ ರಾಜ್, ಪಾಲ್ಫಾಟ್ ರೈಲ್ವೆಯ ಡಿಆರ್ಎಂ ಅರುಣ್ ಕುಮಾರ್ ಚತುರ್ವೇದಿ, ಎಡಿಆರ್ ಎಂ ಜಯಕೃಷ್ಣನ್ ಉಪಸ್ಥಿತರಿದ್ದರು.

Previous articleಸ್ವರ್ಣವಲ್ಲೀ ಮಠದ ಉತ್ತರಾಧಿಕಾರಿ ನೇಮಕ
Next articleಕಣಕುಂಬಿ ಅರಣ್ಯದಲ್ಲಿ ಚಾರಣಕ್ಕೆ ತೆರಳಿದ್ದ ವಿದ್ಯಾರ್ಥಿಗಳ ರಕ್ಷಣೆ