Home ಅಪರಾಧ ಮಂಗಳೂರು: ಮಮ್ತಾಜ್ ಅಲಿ ಮೃತದೇಹ ಪತ್ತೆ

ಮಂಗಳೂರು: ಮಮ್ತಾಜ್ ಅಲಿ ಮೃತದೇಹ ಪತ್ತೆ

0

ಮಂಗಳೂರು: ಕೂಳೂರು ಸೇತುವೆ ಬಳಿ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಸಾಮಾಜಿಕ ಮುಂದಾಳು, ಉದ್ಯಮಿ ಮುತ್ತಾಝ್ ಅಲಿ ಅವರ ಮೃತದೇಹ ಕೂಳೂರಿನ ಫಲ್ಗುಣಿ ನದಿಯಲ್ಲಿ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ. ಮೃತದೇಹ ಪತ್ತೆಯಾದ ಕೂಡಲೇ ಅದನ್ನು ನಗರದ ಎಜೆ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿದೆ.

ರವಿವಾರ ಬೆಳಗ್ಗೆ ಉಡುಪಿ – ಮಂಗಳೂರಿನ ಕೂಳೂರು ಸೇತುವೆಯ ಮೇಲೆ ಮುತ್ತಾಝ್ ಅವರ ಕಾರು ಪತ್ತೆಯಾಗಿತ್ತು. ಅಲ್ಲದೆ, ಕಾರಿನ ಮುಂಭಾಗದ ಬಲಬದಿ ಅಪಘಾತ ನಡೆದಿರುವ ಕುರುಹುಗಳು ಪತ್ತೆಯಾಗಿತ್ತು.

ಮುಲ್ತಾಝ್ ಅಲಿ ಅವರನ್ನು ನಿರಂತರವಾಗಿ ಬೆದರಿಸಿ, ಬ್ಲಾಕ್ ಮೇಲ್ ಮಾಡಿ ಲಕ್ಷಾಂತರ ರೂಪಾಯಿ ಹಣವನ್ನು ಕಿತ್ತುಕೊಂಡು ಮತ್ತಷ್ಟು ಹಣಕ್ಕೆ ಬೇಡಿಕೆಯಿಟ್ಟ ಆರೋಪದಲ್ಲಿ ಮಹಿಳೆ ಸೇರಿದಂತೆ 6 ಮಂದಿ ಆರೋಪಿಗಳ ವಿರುದ್ಧ ಈಗಾಗಲೇ ಕಾವೂರು ಪೊಲೀಸ್‌ ಠಾಣೆಯಲ್ಲಿ ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆ (BNSS) 173ರ ಅಡಿ ಎಫ್ ಐ ಆರ್ ದಾಖಲಾಗಿದೆ.

Exit mobile version