Home ಅಪರಾಧ ಮಂಗಳೂರು ವಿಮಾನ ನಿಲ್ದಾಣ ಪರಿಸರದಲ್ಲಿ ಚಿರತೆ ವಾಕಿಂಗ್…!

ಮಂಗಳೂರು ವಿಮಾನ ನಿಲ್ದಾಣ ಪರಿಸರದಲ್ಲಿ ಚಿರತೆ ವಾಕಿಂಗ್…!

0

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆಯೊಂದು ತಿರುಗಾಟ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇಂದು ಮುಂಜಾನೆ ಅಧಿಕಾರಿಯೊಬ್ಬರು ಕಾರಿನಲ್ಲಿ ಬರುತ್ತಿದ್ದ ವೇಳೆ ಚಿರತೆ ರಸ್ತೆಯಲ್ಲಿ ಕಾಣಿಸಿದೆ. ಕೂಡಲೇ ಅಧಿಕಾರಿ ತನ್ನ ಮೊಬೈಲ್‌ನಿಂದ ಚಿರತೆ ದೃಶ್ಯವನ್ನು ಸೆರೆ ಹಿಡಿದು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ವಿಮಾನ ನಿಲ್ದಾಣ ಪರಿಸರದಲ್ಲಿ ಚಿರತೆ ಕಾಣಿಸಿಕೊಂಡಿರುವ ಕುರಿತು ಅಧಿಕಾರಿಗಳು ನೀಡಿದ ಮಾಹಿತಿಯ ಮೇರೆಗೆ ಅರಣ್ಯ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

Exit mobile version