‘ಮಂಡ್ಯದ ಗಂಡು’ ಸಿನಿಮಾ ಖ್ಯಾತಿಯ ಹಿರಿಯ ನಿರ್ದೆಶಕ ಎ.ಟಿ.ರಘು ನಿಧನ

0
32

ಬೆಂಗಳೂರು: ಕನ್ನಡ ಚಿತ್ರರಂಗದ ಬರಹಗಾರ ಹಾಗೂ ಖ್ಯಾತ ನಿರ್ದೇಶಕ ಎ. ಟಿ. ರಘು ಗುರುವಾರ ರಾತ್ರಿ ನಿಧನರಾಗಿದ್ದಾರೆ.
ಮಂಡ್ಯದ ಗಂಡು’ ಸಿನಿಮಾ ಸೇರಿದಂತೆ ಒಟ್ಟು 55 ಸಿನಿಮಾಗಳನ್ನು ನಿರ್ದೇಶಿಸಿದ್ದರು. ಇನ್ನೂ ರೆಬೆಲ್ ಸ್ಟಾರ್ ಅಂಬರೀಶ್ ನಟನೆಯ 27 ಸಿನಿಮಾಗಳನ್ನು ನಿರ್ದೇಶಿದ್ದರು, 76 ವರ್ಷದ ರಘು ಅವರು ಇತ್ತಿಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದರು. ಜೊತೆಗೆ ಡಯಾಲಿಸಿಸ್ ಮಾಡಿಸಿಕೊಳುತ್ತಿದ್ದರು. ಗುರುವಾರ ರಾತ್ರಿ 9:20ರ ಸುಮಾರಿಗೆ ಕೊನೆಯುಸಿರೆಳೆದಿದ್ದು, ಪತ್ನಿ ಹಾಗೂ ಮಗಳನ್ನು ಅಗಲಿದ್ದಾರೆ. ಸದ್ಯ ಆರ್‌ಟಿ ನಗರದ ಮಠದಹಳ್ಳಿಯಲ್ಲಿ ಪಾರ್ಥಿವ ಶರೀರ ಇಡಲಾಗಿದ್ದು, ಇಂದು ಮದ್ಯಾಹ್ನ 2-3 ಗಂಟೆಯೊಳಗೆ ಹೆಬ್ಬಾಳದ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

Previous articleಬೈಕ್ ಮೇಲೆ ಬಿದ್ದ ರಸ್ತೆ ಬದಿಯ ಮರ: ಯುವಕ ಸ್ಥಳದಲ್ಲಿಯೇ ಸಾವು
Next articleಹನಿಟ್ರ್ಯಾಪ್​ ವಿಚಾರ: ಸ್ಪೀಕರ್ ಮೇಲೆ ಪೇಪರ್​ ಎಸೆತ