ಮಂಡ್ಯ ಕ್ಷೇತ್ರ ಜೆಡಿಎಸ್‌ಗೆ

0
11
JDS

ಬೆಂಗಳೂರು: ಮಂಡ್ಯ, ಹಾಸನ, ಕೋಲಾರ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವ ತೀರ್ಮಾನ ಆಗಿದೆ ಎಂದು ಲೋಕಸಭಾ ಚುನಾವಣಾ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್ ತಿಳಿಸಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದ ವೃಕ್ಷ ಸಭಾಂಗಣದಲ್ಲಿ ನಡೆಯುತ್ತಿರುವ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಮಂಡ್ಯ, ಹಾಸನ, ಕೋಲಾರ ಮೂರು ಕ್ಷೇತ್ರ ಜೆಡಿಎಸ್‌ಗೆ (JDS) ಬಿಟ್ಟುಕೊಡುವ ತೀರ್ಮಾನ ಆಗಿದೆ. ಮೈತ್ರಿ ನಾಯಕರು 25+3 ಸೂತ್ರದಂತೆ ಸೀಟು ಹಂಚಿಕೆ ಮಾಡಿಕೊಂಡಿದ್ದಾರೆ. ಸುಮಲತಾ ಟಿಕೆಟ್ ತೀರ್ಮಾನ ಆಗಿಲ್ಲ ಎಂದು ಹೇಳಿದ್ದು ಆವಾಗ ಸತ್ಯ ಆಗಿತ್ತು. ಈಗ ಜೆಡಿಎಸ್‌ಗೆ ಬಿಟ್ಟು ಕೊಡುವ ಬಗ್ಗೆ ತೀರ್ಮಾನ ಆಗಿದೆ, ಸುಮಲತಾ ಅವರ ಪಾತ್ರ ಬಹಳ ದೊಡ್ಡದಿದೆ. ಅವರ ರಾಜಕೀಯ ಭವಿಷ್ಯವು ಸಹ ಬಹಳ ಉತ್ತಮ ಆಗಿರಲಿದೆ, ಚುನಾವಣೆ ಪ್ರಚಾರ ಆರಂಭ ಆದಮೇಲೆ ಜೆಡಿಎಸ್ ಹಾಗೂ ಬಿಜೆಪಿ ನಾಯಕರು ಒಟ್ಟಾಗಿ ಕೆಲಸ ಮಾಡುತ್ತೇವೆ. ದೇವೇಗೌಡರು ಹಾಗೂ ಕುಮಾರಸ್ವಾಮಿ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಇದ್ದಾರೆ ಎಂದು ತಿಳಿಸಿದ್ದಾರೆ.

Previous articleವೀಣಾ ಕಾಶಪ್ಪನವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಮಾನಕಾರಿ ಪೋಸ್ಟ್: ಪ್ರಕರಣ ದಾಖಲು
Next articleಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟ್​ ಮೊರೆ ಹೋದ ರಾಜ್ಯ ಸರ್ಕಾರ