ಮಂಡ್ಯ ಟಿಕೆಟ್ ಬಿಜೆಪಿಗೆ

0
9

ಮಂಡ್ಯ: ಲೋಕಸಭಾ ಚುನಾವಣೆಗೆ ಹಾಸನ ಹಾಗೂ ಮಂಡ್ಯ ಎರಡು ಕ್ಷೇತ್ರಗಳು ಬಿಜೆಪಿಗೆ ಸಿಗಲಿದೆ. ಒಂದು ವೇಳೆ ಜೆಡಿಎಸ್‍ಗೆ ಕ್ಷೇತ್ರ ಬಿಟ್ಟು ಕೊಟ್ಟರೆ, ಅಭ್ಯರ್ಥಿ ಆಯ್ಕೆಗೆ ನಮ್ಮ ಕಾರ್ಯಕರ್ತರ ಒಪ್ಪಿಗೆ ತೆಗೆದುಕೊಳ್ಳಬೇಕು ಎಂದು ಮಾಜಿ ಶಾಸಕ ಪ್ರೀತಮ್‍ಗೌಡ ಹೇಳಿದ್ದಾರೆ.
ಪಾಂಡವಪುರದ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿದ ಅವರು, ಗೌಡರಿಗೆ ಮಂಡ್ಯದಲ್ಲೂ, ಹಾಸನದಲ್ಲೂ ನೆಂಟರು ಇರ್ತಾರೆ, ನಮ್ಮ ಸಂಕಲ್ಪ ಕುಟುಂಬ ರಾಜಕೀಯದ ವಿರುದ್ಧ ಇರಬೇಕು ಎಂದರು. ಇನ್ನೂ ರಾಜ್ಯದ ಕುಟುಂಬ ರಾಜಕೀಯದ ಬಗ್ಗೆ ಮಾತನಾಡುವುದೇ ಬೇಡ. ಅವರು ಆಯ್ತು, ಮಕ್ಕಳು ಆಯ್ತು, ಮೊಮ್ಮಕ್ಕಳು ಆಯ್ತು, ಈಗ ಮರಿ ಮಕ್ಕಳು ಎಂದು ಅವರು ವ್ಯಂಗ್ಯವಾಡಿದ್ದಾರೆ.

Previous articleದೇವರು, ಧರ್ಮದ ಹೆಸರಿನಲ್ಲಿ ರಾಜಕೀಯ
Next articleಶಾಮನೂರು ಶಿವಶಂಕರಪ್ಪ ಅತಿಥಿಗೃಹ ಉದ್ಘಾಟನೆಗೆ ಶಾ